fbpx
ಸಮಾಚಾರ

ಮೋದಿಗೆ ವೋಟು ಹಾಕ್ತೀರಿ, ಸಮಸ್ಯೆ ನಾನು ಬಗೆಹರಿಸಬೇಕಾ? ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಜನರ ವಿರುದ್ಧ ಸಿಎಂ ಕಿಡಿ.

ಕೆಲಸಕ್ಕೆ ನಾನು ಬೇಕು, ಓಟು ಮಾತ್ರ ಮೋದಿ ಹಾಕಿ ಎಂದು ಸಿಎಂ ಕುಮಾರಸ್ವಾಮಿ ಪ್ರತಿಭಟನಾಕಾರರಲ್ಲಿ ಗರಂ ಆದ ಸನ್ನಿವೇಶ ರಾಯಚೂರಿನಲ್ಲಿ ನಡೆದಿದೆ

ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಪ್ರತಿಭಟನಾನಿರತರ ಮೇಲೆ ಗರಂ ಆದ ಪ್ರಸಂಗ ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು.

ನಂತರ ಸಿಟ್ಟು ಕಡಿಮೆ ಮಾಡಿಕೊಂಡ ಸಿಎಂ, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ರಸ್ತೆ ತಡೆದು ಯಾಕೆ ಪ್ರತಿಭಟನೆ ನಡೆಸುತ್ತೀರಿ?. ನೇರವಾಗಿ ನನ್ನ ಬಳಿ ಯಾಕೆ ಬಂದಿಲ್ಲ? ಎಂದು ಕೇಳಿದರು.

ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮೋದಿ ಅವರಿಗೆ ಮತ ಹಾಕಿದ್ದಾರೆ ಎಂಬ ಕಾರಣಕ್ಕೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top