fbpx
ಸಮಾಚಾರ

“ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿದಿದೆ” ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಚಾಟಿ- ಟ್ರೊಲ್ ಮಗಾ ಅಡ್ಮಿನ್ ರಿಲೀಸ್ ಮಾಡುವಂತೆ ಆದೇಶ.

”ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದೇಯೇ? ಕರ್ನಾಟಕ ಪೊಲೀಸ್‌ ರಾಜ್‌ ಆಗುತ್ತಿದೆಯೇ ? ರಸ್ತೆ ಮೇಲೆ ಜನ ಸಾಮಾನ್ಯರು ಕೂಡ ಓಡಾಡಲು ಸಾಧ್ಯವಾಗದಂತಹ ವಾತಾವರಣ ಇದೆಯಲ್ಲಾ” ಎಂದು ಹೈಕೋರ್ಟ್‌ ಬುಧವಾರ ರಾಜ್ಯ ಸರಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಜೆಡಿಎಸ್‌ ನಾಯಕರಾದ ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಮತ್ತು ನಿಖೀಲ್ ಕುಮಾರಸ್ವಾಮಿ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ವಿಚಾರಗಳನ್ನು ಪ್ರಕಟಿಸಿದ್ದಕ್ಕೆ ‘ಟ್ರೋಲ್ ಮಗಾ’ ಫೇಸ್‌ಬುಕ್‌ನ ಅಡ್ಮಿನ್‌ ಜಯಕಾಂತ್‌ ರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣಕ್ಕೆ ಸಂಭಂದಿಸಿದಂತೆ ಅಧೀನ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರು ಮಾಡಿದ್ದರೂ ಆತನನ್ನು ಪೊಲೀಸ್‌ ಕಸ್ಟಡಿಯಲ್ಲಿಟ್ಟುಕೊಂಡಿರುವುದಕ್ಕೆ ಸರಕಾರದ ವಿರುದ್ಧ ಹೈಕೋರ್ಟ್‌ ಕೆಂಡ ಕಾರಿತು.

ಜಾಮೀನು ಮಂಜೂರು ಆಗಿದ್ದರೂ ವಶದಲ್ಲಿಟ್ಟುಕೊಂಡಿದ್ದು ಸರಿಯಲ್ಲ. ಇದೊಂದು ಗಂಭೀರ ವಿಚಾರವಾಗಿದ್ದು, ಪೊಲೀಸರ ಕ್ರಮ ಖಂಡನಾರ್ಹ ಎಂದು ನ್ಯಾ.ಪಿ.ಎಸ್. ದಿನೇಶ್‍ಕುಮಾರ್ ಅವರಿದ್ದ ಏಕಸದಸ್ಯಪೀಠ ಅಭಿಪ್ರಾಯಪಟ್ಟು ಕೂಡಲೇ ಜಯಕಾಂತ್ ಅವರನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚಿಸಿತು. ಈ ಪ್ರಕರಣದಲ್ಲಿ ಆರೋಪಿಯನ್ನು ತರಾತುರಿಯಲ್ಲಿ ಬಂಧನ ನಡೆಸುವ ಅಗತ್ಯ ಏನಿತ್ತು? ನ್ಯಾಯಾಲಯ ಜಾಮೀನು ನೀಡಿದ್ದರೂ ಇನ್ನೊಂದು ಎಫ್‍ಐಆರ್ ದಾಖಲಿಸಿ ಬಂಧಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

ಯಕಃಶ್ಚಿತ್‌ ಇದೊಂದು ಫೇಸ್‌ಬುಕ್‌ ಪ್ರಕರಣವಷ್ಟೇ ಅಲ್ಲವೇ? ಅಧೀನ ನ್ಯಾಯಾಲಯದ ಆದೇಶಕ್ಕೆ ಬೆಲೆ ಇಲ್ಲವೇ? ಇದು ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಇಲ್ಲ ಎಂಬ ಭಾವನೆ ಬರಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಈ ರಾಜ್ಯದಲ್ಲಿ ಕಾನೂನಿನ ಆಡಳಿತದ ಬದಲು ‘ಪೊಲೀಸ್‌ ರಾಜ್‌’ ಇರುವಂತಿದೆ. ಹೀಗಾದರೆ ಜನಸಾಮಾನ್ಯರು ರಸ್ತೆಯಲ್ಲಿ ಓಡಾಡುವುದಕ್ಕೂ ಕಷ್ಟವಾಗಲಿದೆ. ಇದು ಅತ್ಯಂತ ದುರದೃಷ್ಟಕರ ಸಂಗತಿ ಎಂದು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top