fbpx
ಸಮಾಚಾರ

#IBPSಮೋಸ -ರಾಜ್ಯ ಸಂಸದರ ಮನವಿಗೆ ಕೊನೆಗೂ ಸ್ಪಂದಿಸಿದ ನಿರ್ಮಲ ಸೀತಾರಾಮನ್.

ಐಬಿಪಿಎಸ್‌ ಪರೀಕ್ಷೆಯನ್ನು ಕನ್ನಡ ಸೇರಿದಂತೆ ಆಯಾ ರಾಜ್ಯಗಳ ಭಾಷೆಯಲ್ಲಿ ಬರೆಯಲು ಅವಕಾಶ ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ಜಿಸಿ ಚಂದ್ರಶೇಖರ್ ibps ವಿಚಾರವನ್ನು ಪ್ರಸ್ತಾಪಿಸಿದರು. ಐಬಿಪಿಎಸ್‌ ವಿಚಾರವಾಗಿ ಜಿ.ಸಿ.ಚಂದ್ರಶೇಖರ್‌ ಕನ್ನಡದಲ್ಲೇ ಮಾತನಾಡಿ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಸಚಿವೆ, ”ಇದೊಂದು ಅತ್ಯಂತ ಗಂಭೀರ ವಿಷಯವಾಗಿದೆ. ಈ ಬಗ್ಗೆ ಪರಾಮರ್ಶೆ ನಡೆಸಿ ಬ್ಯಾಂಕಿಂಗ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಹಿತ ಕಾಯಲಾಗುವುದು,” ಎಂದರು..

ಅಂದಹಾಗೆ ಎರಡು ದಿನದ ಹಿಂದೆ ಲೋಕಸಭೆಯಲ್ಲೂ ಯುವ ಸಂಸದ ತೇಜಸ್ವಿ ಸೂರ್ಯ ಐಬಿಪಿಎಸ್ ವಿಚಾರವಾಗಿ ಧ್ವನಿಯೆತ್ತಿ ಸಮಸ್ಯೆ ಬಗಹರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದೀಗ ಕೇಂದ್ರ ಹಣಕಾಸು ಸಚಿವರಿಂದ ಇದಕ್ಕೆ ಸಕಾರಾತ್ಮಕ ಉತ್ತರ ಸಿಕ್ಕಿದ್ದು ಆದಷ್ಟು ಬೇಗ ಸಮಸ್ಯೆ ಬಗಹರಿಯಯಬೇಕಿದೆ.

ಏನಿದು IBPS ವಿವಾದ?
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನಡೆಸಿದ ಪರೀಕ್ಷೆಯಲ್ಲಿ ಹೊರ ರಾಜ್ಯದ ಶೇ 85ರಿಂದ 100ರಷ್ಟು ಅಭ್ಯರ್ಥಿಗಳು ನೇಮಕಗೊಳ್ಳುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಶೇ 20ರಷ್ಟು ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪ್ರಾದೇಶಿಕ ಹಾಗೂ ಸ್ಥಳೀಯ ಭಾಷಿಗರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕೆಂಬ ನಿಯಮವಿದೆ. ಆದರೆ ಈ ನಿಯಮ ಪಾಲನೆ ಆಗುತ್ತಿಲ್ಲ,, ಜೊತೆಗೆ ಮೊದಲು ಇದ್ದ ನಿಯಮವನ್ನು ತಿದ್ದುಪಡಿ ಮಾಡಿ ಬ್ಯಾಂಕಿಂಗ್ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯಬೇಕು ಎಂಬ ನಿಯಮವನ್ನು 2014ರಲ್ಲಿ ಜಾರಿಗೊಳಿಸಲಾಗಿದೆ..

ಕರ್ನಾಟಕದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರ ಉದ್ಯೋಗಾವಕಾಶಕ್ಕೆ ಆದ್ಯತೆ ನೀಡಬೇಕೆಂಬ ಕುರಿತಂತೆ ಕರ್ನಾಟಕದಾದ್ಯಂತ ಕನ್ನಡಪರ ಸಂಘಟನೆಗಳು ಹೋರಾಟಕ್ಕಿಳಿದು ವರ್ಷಗಳೇ ಕಳೆದಿವೆ.ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ನೀಡುತ್ತಿಲ್ಲ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗಿಂತ ಹೊರ ರಾಜ್ಯದವರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ ಎಂದು ವಿದ್ಯಾರ್ಥಿಗಳ ಆರೋಪವಾಗಿದೆ.

ಐಬಿಪಿಎಸ್ ನಡೆಸಿದ ಪರೀಕ್ಷೆಯಲ್ಲಿ ರಾಜ್ಯದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತಿಲ್ಲ. ಈ ಸಂಬಂಧ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳು ಪ್ರತಿಭಟಿಸುತ್ತಲೇ ಬಂದಿದ್ದಾರೆ. ಆದರೆ ಎಷ್ಟೇ ಮನವಿ, ಪ್ರತಿಭಟನೆ, ಹೋರಾಟ ಮಾಡಿದರೂ ಮಾತ್ರ ಹಠ ಹಿಡಿದು ಕೂತಿರುವ ಕೇಂದ್ರ ಸರ್ಕಾರ ಇತ್ತ ಕಡೆ ತಿರುಗಿ ಕೂಡ ನೋಡಿಲ್ಲ…

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top