fbpx
ಸಮಾಚಾರ

ಮುಖ್ಯಮಂತ್ರಿ ಕುಮಾರಸ್ವಾಮಿ ಒಂದು ವಾರ ಅಮೆರಿಕ ವಾಸ್ತವ್ಯ

ಹಂತದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಗಿಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಒಂದು ವಾರದ ಪ್ರವಾಸಕ್ಕಾಗಿ ಶುಕ್ರವಾರ ತಡರಾತ್ರಿ ಅಮೆರಿಕಕ್ಕೆ ಪ್ರಯಾಣ ಬೆಳೆಸಿದರು. ಭಾನುವಾರ ಅಮೆರಿಕದ ನ್ಯೂಜೆರ್ಸಿಯಲ್ಲಿರುವ ಆದಿಚುಂಚನಗಿರಿ ಮಠದ ಆವರಣದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಆಹ್ವಾನದಂತೆ ಸಿಎಂ ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದು, ಜುಲೈ 5 ರಂದು ಅಮೆರಿಕದ ಒಕ್ಕಲಿಗರ ಪರಿಷತ್‌ ಸಮಾವೇಶದಲ್ಲಿ ಪಾಲ್ಗೊಂಡು ಹಿಂತಿರುಗಲಿದ್ದಾರೆ. ಇದೊಂದು ಸಂಪೂರ್ಣ ಖಾಸಗಿ ಭೇಟಿಯಾಗಿದ್ದು, ಸರಕಾರದ ವತಿಯಿಂದ ಯಾವುದೇ ವೆಚ್ಚ ಭರಿಸುತ್ತಿಲ್ಲ ಎಂದು ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ.

ಕುಮಾರಸ್ವಾಮಿ ಅವರಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಜೊತೆಯಾಗಲಿದ್ದಾರೆ. ಒಂದು ವಾರಗಳ ಕಾಲ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಜೊತೆ ಕೆಲವು ಅಧಿಕಾರಿಗಳು ಕೂಡ ಅವರೊಟ್ಟಿಗೆ ತೆರಳಲಿದ್ದಾರೆ. ದೇವೇಗೌಡರು ಎರಡು ದಿನಗಳ ಮಟ್ಟಿಗೆ ಅಮೆರಿಕದಲ್ಲಿದ್ದು, ಬಳಿಕ ರಾಜಧಾನಿಗೆ ಹಿಂದಿರುಗಲಿದ್ದಾರೆ.

ಕಳೆದ ಶುಕ್ರವಾರ ಯಾದಗಿರಿಯ ಚಂಡರಕಿಯಿಂದ ಮೊದಲ ಗ್ರಾಮವಾಸ್ತವ್ಯ ನಡೆಸಿದ ಅವರು, ಬಳಿಕ ರಾಯಚೂರಿನ ಕೆರೇಗುಡ್ಡ ಪ್ರವಾಸ ಕೈಗೊಂಡರು. ಇಂದು ಬೀದರ್​ನ ಉಜಳಂಬದಲ್ಲಿ ಜನರ ಸಮಸ್ಯೆಯನ್ನು ಆಲಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top