fbpx
ಸಮಾಚಾರ

ಮಂಡ್ಯ ಸಂಸದೆ ಸುಮಲತಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮಂಡ್ಯ ರೈತರು.

‘ನಾಲೆಗೆ ನೀರು ಹರಿಸಿ ರೈತರು ಹಾಗೂ ಬೆಳೆ ಉಳಿಸಿ’ ಎಂದು ಆಗ್ರಹಿಸಿ ಮಂಡ್ಯದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಹೋರಾಟಗಾರರ ಬಳಿ ಬಂದು ಅವರ ಅಹವಾಲನ್ನು ಸ್ವೀಕರಿಸದ ಸಂಸದೆ ಸುಮಲತಾ ಅಂಬರೀಷ್​ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ ಸಂಸತ್​ನಲ್ಲಿ ಹಾಸನ ಸಂಸದರಾದ ಪ್ರಜ್ವಲ್​​ ರೇವಣ್ಣ ಅವರು ನಾಲೆಗಳಿಗೆ ಕೆಆರ್​ಎಸ್​ ನೀರು ಹರಿಸುವಂತೆ ಧ್ವನಿ ಎತ್ತಿದ್ದಾರೆ. ಮನವಿ ಪತ್ರಗಳನ್ನು ಕೊಡುತ್ತಿದ್ದಾರೆ. ಆದರೆ, ಮಂಡ್ಯ ಸಂಸದೆ ಸುಮಲತಾ ಅವರು ಮಾತ್ರ ಇನ್ನು ಈ ಬಗ್ಗೆ ಧ್ವನಿ ಎತ್ತಿಲ್ಲ. ಅವರು ಈ ಬಗ್ಗೆ ಧ್ವನಿ ಎತ್ತಲೇಬೇಕು” ಎಂದು ಆಗ್ರಹಿಸಿದರು.

ಸುಮಲತಾ ಬೆಂಬಲ:
ರೈತರ ಬೆನ್ನಿಗೆ ನಿಲ್ಲುವುದಾಗಿ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್​​ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.ಮಂಡ್ಯ ಜಿಲ್ಲೆಯ ಕೆರೆ ಕಟ್ಟೆಗಳನ್ನು ತುಂಬಿಸಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ನಿವಾರಿಸುವಂತೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಈ ಕಾವೇರಿ ಮುಷ್ಕರಕ್ಕೆ ಸದಾ ನನ್ನ ಬೆಂಬಲವಿದೆ. ಈಗಾಗಲೇ 2 ಟಿಎಂಸಿ ನೀರನ್ನು ಹರಿಸುವಂತೆ ಪ್ರಧಾನ ಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಹಾಗೆಯೇ ಕೇಂದ್ರ ಜಲ ಶಕ್ತಿ ಸಚಿವರಿಗೂ ಮನವಿ ಮಾಡಿದ್ದೇನೆ ಎಂದು ಸುಮಲತಾ ಅಂಬರೀಶ್​​ ಟ್ವಿಟ್ಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಮಂಡ್ಯದಲ್ಲಿನ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ದರ್ಶನ್​​ ಪುಟ್ಟಣಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೂ ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸಿಲ್ಲ ಎಂದು ಹೋರಾಟ ನಿರತ ರೈತರು ಆಕ್ರೋಷಗೊಂಡಿದ್ದಾರೆ. ಸರ್ಕಾರ ನಮ್ಮ ಹೋರಾಟಕ್ಕೆ ಮಣಿಯದಿದ್ದಲ್ಲಿ ಜಿಲ್ಲಾಧಿಕಾರಿ‌ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾದರೂ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿದ್ದು, ನೀರು ಹರಿಸದಿದ್ದರೆ ಕುಟುಂಬದೊಂದಿಗೆ ಸಾಮೂಹಿಕ ಆತ್ಮಹತ್ಯೆಯೊಂದೇ ದಾರಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top