fbpx
ಸಮಾಚಾರ

ಗ್ರಾಮೀಣ ಬ್ಯಾಂಕ್‌ಗಳಲ್ಲಿ 580 ಹುದ್ದೆಗಳಿಗೆ ಅರ್ಜಿ ಅಹ್ವಾನ- ಬೇಗ ಅರ್ಜಿ ಹಾಕಿ.

ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ಗ್ರಾಮೀಣ ಬ್ಯಾಂಕ್‌ಗಳಲ್ಲಿನ ವಿವಿಧ ಹುದ್ದೆಗಳಿಗೆ ನೇಮಕ ಮಾಡಲು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ,. ಆಸಕ್ತ ಅಭ್ಯರ್ಥಿಗಳು ಜುಲೈ 4ರ ತನಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆ ಹೆಸರು: ಆಫಿಸರ್‌ ಅಸಿಸ್ಟೆಂಟ್‌, ಆಫೀಸರ್‌ ಸ್ಕೇಲ್‌–1, ಆಫೀಸರ್‌ ಸ್ಕೇಲ್‌–2, (ಆಫೀಸ್ ಅಸಿಸ್ಟೆಂಟ್ ಹುದ್ದೆ 238, ಆಫೀಸರ್ ಸ್ಕೇಲ್ -1ರ 266 ಹುದ್ದೆಗಳು, ಆಫೀಸರ್ ಸ್ಕೇಲ್ -2ರ 76 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. )

ವಿದ್ಯಾರ್ಹತೆ:
ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು, ಸ್ಥಳೀಯ ಭಾಷೆಯನ್ನು ತಿಳಿದಿರಬೇಕು, ಕಂಪ್ಯೂಟರ್‌ ಜ್ಞಾನ್‌ ಗೊತ್ತಿರಬೇಕು.

ಆಫೀಸರ್‌ ಸ್ಕೆಲ್‌–1ಗೆ – ಕೃಷಿ, ತೋಟಗಾರಿಕೆ, ಅರಣ್ಯ, ಪ್ರಾಣಿಶಾಸ್ತ್ರ, ಪಶು ವಿಜ್ಞಾನ, ಅಗ್ರಿಕಲ್ಚರ್‌ ಎಂಜಿನಿಯರಿಂಗ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಅಂಡ್‌ ಕೋ–ಆಪರೇಷನ್‌, ಇನ್‌ಫರ್‌ಮೇಷನ್‌ ಟೆಕ್ನಾಲಜಿ, ಮ್ಯಾನೇಜ್‌ಮೆಂಟ್‌ ಲಾ, ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ವಿಷಯಗಳಲ್ಲಿ ಪದವಿ ಪಡೆದಿರಬೇಕು

ಆಪೀಸರ್‌ ಸ್ಕೇಲ್‌–2ಗೆ– ಯಾವುದೇ ಪದವಿಯಲ್ಲಿ ಶೇ 50 ರಷ್ಟು ಅಂಕ ಪಡೆದಿರಬೇಕು. ಯಾವುದೇ ಬ್ಯಾಂಕ್‌ ಅಥವಾ ಹಣಕಾಸು ಸಂಸ್ಥೆಯಲ್ಲಿ 2 ವರ್ಷ ಅನುಭವ ಇರಬೇಕು.

ಅರ್ಜಿ ಶುಲ್ಕದ ವಿವರ
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂ. ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಆಸಕ್ತರು www.ibps.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top