fbpx
ಸಮಾಚಾರ

ಕರ್ನಾಟಕದ 18 ಸಾವಿರ ಗ್ರಾಮೀಣ ಬ್ಯಾಂಕ್‌ ಹುದ್ದೆಯಲ್ಲಿ ಕನ್ನಡಿಗರಿಗೆ ಸಿಕ್ಕಿದ್ದು ಕೇವಲ 1,060!

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್​ಗಳಲ್ಲಿ (ಆರ್​ಆರ್​ಬಿ) ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) ಮೂಲಕ ಅಧಿಕಾರಿಗಳ ನೇಮಕಾತಿ ವೇಳೆ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಅನ್ಯಾಯವಾಗುತ್ತಿದೆ ಎಂಬ ಕೂಗು ಎಲ್ಲೆಡೆ ಜೋರಾಗಿದೆ. ಬ್ಯಾಂಕುಗಳ ವಿವಿಧ ಹುದ್ದೆಗಳ ನೇಮಕಕ್ಕೆ 10ನೇ ತರಗತಿವರೆಗೂ ಆಯಾ ರಾಜ್ಯ ಭಾಷೆಗಳ (ಕನ್ನಡ) ಕಲಿಕೆ ಕಡ್ಡಾಯ ಎನ್ನುವ ನಿಯಮ ಕೈಬಿಟ್ಟಿದ್ದರಿಂದಾಗಿ, ಹೆಚ್ಚಿನ ಹುದ್ದೆಗಳು ಅನ್ಯ ರಾಜ್ಯದವರ ಪಾಲಾಗುತ್ತಿವೆ.

ನಾಲ್ಕು ವರ್ಷಗಳಲ್ಲಿ 18 ಸಾವಿರ ಸಿಬ್ಬಂದಿ ನೇಮಕವಾಗಿದ್ದು, ಇದರಲ್ಲಿ ಕನ್ನಡಿಗರ ಸಂಖ್ಯೆ 1,060 ಮಾತ್ರ. ಆಯ್ಕೆಯಾದವರಲ್ಲಿ ಆಂಧ್ರಪ್ರದೇಶ, ಬಿಹಾರ ಮತ್ತು ರಾಜಸ್ಥಾನದ ಅಭ್ಯರ್ಥಿಗಳ ಸಂಖ್ಯೆಯೇ ಹೆಚ್ಚು ಎಂಬ ಮಾಹಿತಿ ಬಹಿರಂಗವಾಗಿದೆ..

ಯಾಕೀ ಅನ್ಯಾಯ?
2014ರ ವರೆಗೆ ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗದಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿತ್ತು. ಆದರೆ 2014ರ ನಂತರ ಬ್ಯಾಂಕಿಂಗ್ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯಬೇಕು ಎಂಬ ನಿಯಮವನ್ನು ಜಾರಿಗೊಳಿಸಲಾಗಿದೆ.. ಇದರಿಂದಾಗಿ ಕೇವಲ ಸ್ಥಳೀಯ ಭಾಷೆಯ ಜ್ಞಾನವಿರುವ ಪ್ರತಿಭಾನ್ವಿತರು ಅವಕಾಶ ವಂಚಿತರಾಗುತ್ತಿದ್ದಾರೆ.

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನಡೆಸಿದ ಪರೀಕ್ಷೆಯಲ್ಲಿ ಹೊರ ರಾಜ್ಯದ ಶೇ 85ರಿಂದ 100ರಷ್ಟು ಅಭ್ಯರ್ಥಿಗಳು ನೇಮಕಗೊಳ್ಳುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಶೇ 20ರಷ್ಟು ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪ್ರಾದೇಶಿಕ ಹಾಗೂ ಸ್ಥಳೀಯ ಭಾಷಿಗರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕೆಂಬ ನಿಯಮವಿದೆ. ಆದರೆ ಈ ನಿಯಮ ಪಾಲನೆ ಆಗುತ್ತಿಲ್ಲ,, ಜೊತೆಗೆ ಮೊದಲು ಇದ್ದ ನಿಯಮವನ್ನು ತಿದ್ದುಪಡಿ ಮಾಡಿ ಬ್ಯಾಂಕಿಂಗ್ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯಬೇಕು ಎಂಬ ನಿಯಮವನ್ನು 2014ರಲ್ಲಿ ಜಾರಿಗೊಳಿಸಲಾಗಿದೆ..

ಕರ್ನಾಟಕದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರ ಉದ್ಯೋಗಾವಕಾಶಕ್ಕೆ ಆದ್ಯತೆ ನೀಡಬೇಕೆಂಬ ಕುರಿತಂತೆ ಕರ್ನಾಟಕದಾದ್ಯಂತ ಕನ್ನಡಪರ ಸಂಘಟನೆಗಳು ಹೋರಾಟಕ್ಕಿಳಿದು ವರ್ಷಗಳೇ ಕಳೆದಿವೆ.ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ನೀಡುತ್ತಿಲ್ಲ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗಿಂತ ಹೊರ ರಾಜ್ಯದವರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ ಎಂದು ವಿದ್ಯಾರ್ಥಿಗಳ ಆರೋಪವಾಗಿದೆ.

ಐಬಿಪಿಎಸ್ ನಡೆಸಿದ ಪರೀಕ್ಷೆಯಲ್ಲಿ ರಾಜ್ಯದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತಿಲ್ಲ. ಈ ಸಂಬಂಧ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳು ಪ್ರತಿಭಟಿಸುತ್ತಲೇ ಬಂದಿದ್ದಾರೆ. ಆದರೆ ಎಷ್ಟೇ ಮನವಿ, ಪ್ರತಿಭಟನೆ, ಹೋರಾಟ ಮಾಡಿದರೂ ಮಾತ್ರ ಹಠ ಹಿಡಿದು ಕೂತಿರುವ ಕೇಂದ್ರ ಸರ್ಕಾರ ಇತ್ತ ಕಡೆ ತಿರುಗಿ ಕೂಡ ನೋಡಿಲ್ಲ…

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top