fbpx
ಸಮಾಚಾರ

ಕೇಂದ್ರ ಸರ್ಕಾರದ ಮಹತ್ವದ ಯೋಜನೆ -ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ.

ಒಂದು ದೇಶ ಒಂದು ತೆರಿಗೆ(ಜಿಎಸ್ ಟಿ) ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ‘ಒಂದು ದೇಶ, ಒಂದು ಪಡಿತರ ಚೀಟಿ’ ವ್ಯವಸ್ಥೆ ಜಾರಿಗೆ ಮುಂದಾಗಿದ್ದು, ಇದಕ್ಕೆ ಒಂದು ವರ್ಷದ ಗಡುವು ನೀಡಿದೆ.

ಒಂದು ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ನಾಗರಿಕರು ದೇಶದ ಯಾವುದೇ ರಾಜ್ಯದಲ್ಲಿ ಬೇಕಾದರೂ ಪಡಿತರ ಪಡೆಯುವ ‘ಒಂದು ದೇಶ ಒಂದೇ ಪಡಿತರ ಚೀಟಿ’ಯೋಜನೆಯನ್ನು 2020ರ ಜೂನ್ 30ರೊಳಗೆ ಜಾರಿಗೆ ತರಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಕರ್ನಾಟಕ, ಆಂಧ್ರ, ಗುಜರಾತ್‌, ಹರಾರ‍ಯಣ, ಜಾರ್ಖಂಡ್‌, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಲ್ಲಿ ಇಂಥ ಸೌಲಭ್ಯವಿದೆ. ಕರ್ನಾಟಕದಲ್ಲಿ ರೇಷನ್ ಹೊಂದಿರುವವರು ರಾಜ್ಯದಲ್ಲಿ ಎಲ್ಲಿ ಬೇಕಾದರೂ ರೇಷನ್ ಪಡೆಯುವ ಅವಕಾಶ ಹೊಂದಿದ್ದಾರೆ. ಈಗ ಕೇಂದ್ರ ಸರ್ಕಾರ ಇದನ್ನು ದೇಶವ್ಯಾಪಿ ಅನುಷ್ಠಾನಕ್ಕೆ ತರಲು ಹೊರಟಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್, ಈ ಕ್ರಾಂತಿಕಾರಕ ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಜಾರಿಗೆ ತರಲು ಕೇಂದ್ರ ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top