fbpx
ಸಮಾಚಾರ

ಚೊಚ್ಚಲ ಭಾಷಣದಲ್ಲೇ ಮಂಡ್ಯ ರೈತರ ಮನಗೆದ್ದ ಸುಮಲತಾ ಅಂಬರೀಷ್

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ಸಂಸತ್ ನಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿ ಮಂಡ್ಯ ಜನತೆಗೆ ಧನ್ಯವಾದ ಹೇಳಿದ್ದಾರೆ. “ಮಂಡ್ಯ ಕ್ಷೇತ್ರದ ನನ್ನ ಹೆಮ್ಮೆಯ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಮಂಡ್ಯ ಜನತೆಗೆ ಕನ್ನಡದಲ್ಲಿ ಶುಭಾಶಯ ಕೋರಿ ನಂತ್ರ ಇಂಗ್ಲಿಷ್‍ನಲ್ಲಿ ತಮ್ಮ ಮಾತನ್ನು ಮುಂದುವರಿಸಿದರು.

 

 

 

 

“ನನ್ನ ಕ್ಷೇತ್ರ ಮಂಡ್ಯದಲ್ಲಿ ಜನರು ತೀವ್ರ ಬರ ಎದುರಿಸುತ್ತಿದ್ದಾರೆ. ಮಳೆ ನಿಗದಿತ ಪ್ರಮಾಣದಲ್ಲಿ ಬರದೇ ಇದ್ದುದರಿಂದ ಅಲ್ಲದೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಅಲ್ಲದೆ ಕಬ್ಬು ಹಾಗೂ ಭತ್ತ ಬೆಳೆಗಾರರು ಕೂಡ ನೀರಿಲ್ಲದೆ ಸಂಕಷ್ಟದಲ್ಲಿದ್ದಾರೆ” ಎಂದು ತಿಳಿಸಿದರು.

” ನಾವೆಲ್ಲರೂ ಎಲ್ಲರೂ ತಕ್ಷಣ ರೈತರ ನೆರವಿಗೆ ಬರಬೇಕು. ಪ್ರಧಾನಿ ಮೋದಿ ಹಾಗೂ ಜಲಶಕ್ತಿ ಸಚಿವರು ಈ ಬಗ್ಗೆ ಕೂಡಲೇ ಗಮನ ಕೊಡಬೇಕು. ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕಿದೆ. ಎಲ್ಲರೂ ಸೇರಿ ಸಮಸ್ಯೆ ಬಗೆಹರಿಸಬೇಕಿದೆ.. ಎಂದು ಸುಮಲತಾ ಮನವಿ ಮಾಡಿಕೊಂಡರು. ಬಳಿಕ ಸುಮಲತಾ ಅವರು ಜೈ ಜವಾನ್, ಜೈ ಕಿಸಾನ್, ಜೈ ಹಿಂದ್, ಜೈ ಕರ್ನಾಟಕ ಎಂದು ಘೋಷಣೆ ಮಾಡುವ ಮೂಲಕ ತಮ್ಮ ಮಾತನ್ನು ಮುಗಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top