fbpx
ಸಮಾಚಾರ

ದಲಿತ ಶಾಸಕ ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?

ಎಚ್.ವಿಶ್ವನಾಥ್ ರಾಜಿನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ನೀಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿವೆ.

ಜೆಡಿಎಸ್‌ ನೂತನ ರಾಜ್ಯಾಧ್ಯಕ್ಷ ಹುದ್ದೆಗೆ ದಲಿತರಿಗೆ ಅವಕಾಶ ಮಾಡಿಕೊಡುವ ಚಿಂತನೆ ನಡೆಸಿರುವುದಾಗಿ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ”ಪಕ್ಷದಿಂದ ಆರು ಮಂದಿ ಪರಿಶಿಷ್ಟ ಶಾಸಕರು ಗೆದ್ದಿದ್ದಾರೆ. ದಲಿತರಿಗೆ ದೇವೇಗೌಡರು ಏನೂ ಮಾಡಲಿಲ್ಲ ಎಂಬ ಅಸಮಾಧಾನವಿದೆ. ಹೀಗಾಗಿ, ಪರಿಶಿಷ್ಟ ಸಮುದಾಯದ ನಾಯಕರಿಗೇ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಚಿಂತನೆಯಲ್ಲಿದ್ದೇನೆ” ಎಂದು ತಿಳಿಸಿದ್ದರು.

ಈ ಬೆನ್ನಲ್ಲೇ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಖಂಡಿತ ನಿಭಾಯಿಸುವೆ ಎಂದು ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಮಾತನಾಡಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಈ ಸಂಬಂಧ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ನೂತನ ಅಧ್ಯಕ್ಷರ ಹೆಸರು ಬಹಿರಂಗವಾಗಲಿದೆ ಎಂದರು. ಇನ್ನು ವಿಶ್ವನಾಥ್ ರಾಜೀನಾಮೆ ಅಂಗೀಕರಿಸದ ಹೆಚ್.ಡಿ.ದೇವೇಗೌಡರು, ಆ ಸ್ಥಾನವನ್ನು ವಿಶ್ವನಾಥ್‌ರಿಂದಲೇ ಬೇರೆಯವರಿಗೆ ವರ್ಗಾಯಿಸುತ್ತೇನೆಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top