fbpx
ಸಮಾಚಾರ

13 ಶಾಸಕರು ರಾಜೀನಾಮೆ- ದೋಸ್ತಿ ಸರ್ಕಾರಕ್ಕೆ ಬಿಗ್ ಶಾಕ್.

ಇಂದು ನಾಳೆ ಎನ್ನುತ್ತ ದಿನದೂಡುತ್ತಿದ್ದ ಬಂಡಾಯ ಶಾಸಕರು ಕೊನೆಗೂ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದ್ದಾರೆ. ಆನಂದ್​ ಸಿಂಗ್​ ಬೆನ್ನಲ್ಲೇ ರಾಜೀನಾಮೆ ಘೋಷಿಸಿದ್ದ ರಮೇಶ್​ ತಮ್ಮ 8ಜನ ಬೆಂಬಲಿಗ ಶಾಸಕರೊಂದಿಗೆ ರಾಜೀನಾಮೆ ನೀಡಿದ್ದಾರೆ. ಇವರ ಬೆನ್ನಲ್ಲೇ ಇನ್ನಷ್ಟು ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದು ಮೈತ್ರಿ ಸರ್ಕಾರ ಬೀಳಿಸಲು ಸಜ್ಜಾಗಿದ್ದಾರೆ.

ಮೊದಲನೆಯದಾಗಿ ಬಿಡುಗಡೆಯಾಗಿರುವ ಬಂಡಾಯಗಾರರ ಪಟ್ಟಿಯಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಿರೇಕೆರೂರು ಶಾಸಕ ಬಿ.ಸಿಪಾಟೀಲ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ ನೀಡಿದ್ದಾರೆ. ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ.ಆರ್.ಪೇಟೆ ಶಾಸಕ. ನಾರಾಯಣ ಗೌಡ ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ತಲ್ಲಣ ಶುರುವಾಗಿದೆ.

ಇತ್ತ ಶಾಸಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಫುಲ್ ಅಲರ್ಟ್ ಆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಈಗಗಾಗಲೇ ರಾಜಭವನದ ಕಡೆ ಹೆಜ್ಜೆ ಹಾಕಿದ್ದು, ಒಂದು ವೇಳೆ ಸರ್ಕಾರ ಬಿದ್ದರೆ ಬಿಜೆಪಿಗೆ ಸರ್ಕಾರ ರಚಿಸುವ ಅವಕಾಶ ನೀಡಬೇಕೆಂದು ಹಕ್ಕು ಮಂಡಿಸಿದ್ದಾರೆ. ಒಟ್ಟಾರೆಯಾಗಿ ರಾಜಕೀಯ ವಲಯದಲ್ಲಾಗುತ್ತಿರುವ ಬೆಳವಣಿಗೆಗಳಿಂದ ವಿದೇಶೀ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ರಾಜ್ಯಕ್ಕೆ ಮರಳುವ ಮೊದಲೇ ಸರ್ಕಾರ ಬೀಳುವ ಸಾಧ್ಯತೆಗಳು ಹೆಚ್ಚಾಗಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top