fbpx
ಸಮಾಚಾರ

ಬಾಲಿವುಡ್ ನಟನ ಮಗಳ ಜೊತೆ ಕೆ.ಎಲ್ ರಾಹುಲ್ ಡೇಟಿಂಗ್.

ಟಿಂ ಇಂಡಿಯಾ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ವಿಶ್ವಕಪ್‍ನಲ್ಲಿ ತಮ್ಮ ಪವರ್‍ಫುಲ್ ಬ್ಯಾಟಿಂಗ್ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಆದರೆ ಈಗ ಬಿಟೌನ್ ಬೆಡಗಿ ಜೊತೆ ರಾಹುಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಹಾಟ್ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಕನ್ನಡದ ಪೈಲ್ವಾನ್ ಸಿನಿಮಾದಲ್ಲಿ ನಟಿಸಿರುವ ಬಾಲಿವುಡ್‌ನ ಹಿರಿಯ ನಟ ಸುನಿಲ್‌ ಶೆಟ್ಟಿಪುತ್ರಿ, ನಟಿ ಆಥಿಯಾ ಶೆಟ್ಟಿಜತೆ ಡೇಟಿಂಗ್‌ ನಡೆಸುತ್ತಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ.

 

 

ಸಲ್ಮಾನ್ ಖಾನ್ ನಿರ್ಮಾಣದ ‘ಹೀರೋ’ ಚಿತ್ರದ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಟ್ಟಿದ್ದ ಆತಿಯಾ ಸದ್ಯ ರಾಹುಲ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುರಾವೆ ಎಂಬಂತೆ ಆಕಾಂಕ್ಷ ರಂಜನ್ ಕಪೂರ್ ಎಂಬವರು ಫೋಟೋವೊಂದನ್ನು ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಅಥಿಯಾ ಈ ಬಗ್ಗೆ ಉತ್ತರ ನೀಡಲು ನಿರಾಕರಿಸಿದ್ದಾರೆ. ಅಂತೆಯೇ ರಾಹುಲ್ ಲಂಡನ್ ನಲ್ಲಿ ವಿಶ್ವಕಪ್ ಪಂದ್ಯದಲ್ಲಿ ಬ್ಯುಸಿ ಇರುವುದರಿಂದ ಈ ಬಗ್ಗೆ ಅವರ ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಹಿಂದೆ ರಾಹುಲ್ ನಟಿ ನಿಧಿ ಅಗರ್ವಾಲ್ ಜೊತೆ ರಿಲೇಷನ್‍ಶಿಪ್‍ನಲ್ಲಿದ್ದರು ಎಂಬ ಗಾಸಿಫ್ ಎಲ್ಲೆಡೆ ಹರಿದಾಡಿತ್ತು. ಆಗ ನಾವಿಬ್ಬರು ಒಳ್ಳೆಯ ಸ್ನೇಹಿತರು ಎಂದು ಇಬ್ಬರೂ ಹೇಳಿಕೊಂಡಿದ್ದರು. ಇನ್ನೊಂದೆಡೆ ಅಥಿಯಾ ಅಂತರಾಷ್ಟ್ರೀಯ ರ್ಯಾಪರ್ ಹಾಗೂ ಗಾಯಕ ಡ್ರೇಕ್ ಜೊತೆ ಡೇಟಿಂಗ್ ನಡೆಸುತ್ತಿದ್ದರು ಸುದ್ದಿ ಕೂಡ ಕೇಳಿಬಂದಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top