fbpx
ಸಮಾಚಾರ

“ನಿಖಿಲ್ ಸೋತಿದ್ದಕ್ಕೆ ಮಂಡ್ಯ ರೈತರ ಮೇಲೆ ಬರೆ ಎಳೆಯುತ್ತಿದ್ದಾರೆ” ಸಿಎಂ ವಿರುದ್ಧ ದರ್ಶನ್ ಆರೋಪ.

ರಾಜ್ಯದಂತ ಸಕಾಲಕ್ಕೆ ಮಳೆ ಬಾರದೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ರೈತರ ಮೇಲೆ ವರುಣ ದೇವಾ ಮುನಿಸಿಕೊಂಡಿದ್ದು ದೊಡ್ಡ ಹೊಡೆತ ನೀಡಿದೆ. ಹಾಗಾಗೇ ಉತ್ತಮ ಮಳೆ ಆಗಲೆಂದು ರೈತ ಸಂಘದ ಮುಖಂಡ ದರ್ಶನ್ ಪುಟ್ಟಣ್ಣಯ್ಯ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ್ದಾರೆ.

 

 

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, “ಮಂಡ್ಯದಲ್ಲಿ ಕಬ್ಬು ಬೆಳೆಯುವ ರೈತರಿಗೆ KRS ಅಣೆಕಟ್ಟೆಯಿಂದ ನೀರು ಹರಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕೂಡ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನಾಲೆಗಳಿಗೆ ನೀರು ಹರಿಸದೇ ರೈತರ ತಾಳ್ಮೆ ಪರೀಕ್ಷೆ ಮಾಡಲಾಗುತ್ತಿದೆ.. KRSನಿಂದ ನಾಳೆಗಳಿಗೆ ನೀರು ಹರಿಸದಿರುವುದರ ಹಿಂದಿನ ಕಾರಣವೇನು? ನೀರು ಹರಿಸದಿದಕ್ಕಾಗಿ ಸುಮಾರು 40 ಸಾವಿರ ರೈತ ಕುಟುಂಬಗಳು ಕಂಗಾಲಾಗಿವೆ. ಕಾವೇರಿ ನೀರನ್ನೇ ಅವಲಂಬಿಸಿರುವ ರೈತರ ಮೇಲೆ ನೂರಾರು ಕೋಟಿ ಸಾಲದ ಹೊರೆಯಿದೆ. ಈ ವಾಸ್ತವವನ್ನು ತಿಳಿದು ನಮ್ಮ ಪಾಲಿನ ನೀರನ್ನು ನಮಗೆ ಹರಿಸಬೇಕು” ಎಂದು ಆಗ್ರಹಿಸಿದರು.

ಇದೆ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ದರ್ಶನ್ “ಮಂಡ್ಯದಲ್ಲಿ ನಿಖಿಲ್ ಸೋತ ಕಾರಣ ರೈತರ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮಂಡ್ಯ ರೈತರ ಸಮಸ್ಯೆ ಆಲಿಸುವುದನ್ನು ಬಿಟ್ಟು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ” ಎಂದು ‌ದೂರಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top