fbpx
ಸಮಾಚಾರ

ಪಕ್ಷದಲ್ಲಿರುವ ತಾರತಮ್ಯದಿಂದ ಬೇಸತ್ತು ನಾನು ರಾಜೀನಾಮೆ ನೀಡುತ್ತಿದ್ದೇನೆ: ರಾಮಲಿಂಗಾ ರೆಡ್ಡಿ.

ನಾನು ರಾಜಿನಾಮೆ ನೀಡುತ್ತಿದ್ದೇನೆ, ಆದರೆ ಪಕ್ಷ ಬಿಡಲು ನನಗೆ ನೋವಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

 

 

ರಾಜಿನಾಮೆ ನೀಡಲು ವಿಧಾನಸೌಧಕ್ಕೆ ಆಗಮಿಸಿದ ರಾಮಲಿಂಗಾರೆಡ್ಡಿ, ಸ್ಪೀಕರ್ ಗೆ ರಾಜಿನಾಮೆ ನೀಡಲು ಬಂದಿದ್ದೇನೆ, ಆದರೆ ತಮ್ಮ ಪುತ್ರಿ ಸೌಮ್ಯಾ ರೆಡ್ಡಿ ರಾಜಿನಾಮೆ ಬಗ್ಗೆ ನನಗೇನು ತಿಳಿದಿಲ್ಲ, ನೀವು ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗ ರೆಡ್ಡಿ, ನಾನು ಮೊದಲಿನಿಂದ ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಿರಲಿಲ್ಲ. ನಾನು ಈಗ ಬಂದು ರಾಜೀನಾಮೆ ಕೊಡುತ್ತಿದ್ದೇನೆ. ಒಳಗಡೆ ಯಾರೆಲ್ಲ ಇದ್ದಾರೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಪಕ್ಷ ಬಿಟ್ಟು ಹೋಗಲು ನಮಗೂ ತುಂಬಾ ದು:ಖವಾಗುತ್ತಿದೆ. ಆದರೆ ನನಗೆ ಯಾವುದೇ ಕಾಂಗ್ರೆಸ್ ಮುಖಂಡರ ಮೇಲೆ ಬೇಸರವಿಲ್ಲ. ಹೀಗಾಗಿ ಈ ಹಿಂದೆಯೇ ರಾಜೀನಾಮೆಯ ಬಗ್ಗೆ ಕಾರಣಗಳನ್ನು ಹೇಳಿದ್ದೇನೆ. ತಕ್ಷಣಕ್ಕೆ ಬೇರೆ ಪಕ್ಷಕ್ಕೆ ಸೇರುವ ಯೋಚನೆ ಮಾಡಿಲ್ಲ ಎಂದು ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ನೀಡಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top