fbpx
ಸಮಾಚಾರ

ಡಿ.ಕೆ.ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ವಿಶೇಷ ದೂರು: ಕಾರಣವೇನು ಗೊತ್ತಾ?

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗುವ ಸೂಚನೆ ದೊರಕಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆನಂದ್​ ಸಿಂಗ್​ ಬೆನ್ನಲ್ಲೇ ರಾಜೀನಾಮೆ ಘೋಷಿಸಿದ್ದ ರಮೇಶ್​ ತಮ್ಮ 8 ಜನ ಬೆಂಬಲಿಗ ಶಾಸಕರೊಂದಿಗೆ ರಾಜೀನಾಮೆ ನೀಡಿದ್ದಾರೆ. ಇವರ ಬೆನ್ನಲ್ಲೇ ಇನ್ನಷ್ಟು ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದು ಮೈತ್ರಿ ಸರ್ಕಾರ ಬೀಳಿಸಲು ಸಜ್ಜಾಗಿದ್ದಾರೆ.

 

 

ಈ ಮದ್ಯೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ವಿಶೇಷ ದೂರು ನೀಡಲಾಗಿದೆ. ಯಡಿಯೂರಪ್ಪ ಪಿಎ ಸಂತೋಷ್ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕ ಮುನಿರತ್ನ ಅವರು ತಂದಿದ್ದ ರಾಜೀನಾಮೆ ಪತ್ರವನ್ನು ಹರಿದು ಹಾಕಿದ ಆರೋಪ ಹಿನ್ನೆಲೆ ಯಡಿಯೂರಪ್ಪ ಪಿಎ ಸಂತೋಷ್ ರಾಜ್ಯಪಾಲರಿಗೆ ವಿಶೇಷ ದೂರು ಸಲ್ಲಿಸಿದ್ದಾರೆ. ರಾಜೀನಾಮೆ ಹರಿದು ಹಾಕಿದ್ದನ್ನ ಸಂತೋಷ್ ವೀಡಿಯೋ ಮಾಡಿದ್ದರು. ಅಲ್ಲದೆ, ವೀಡಿಯೋ ಜೊತೆಗೆ ಲಿಖಿತ ದೂರು ನೀಡಿದ್ದರು. ಈ ಹಿನ್ನೆಲೆ ಡಿ.ಕೆ.ಶಿವಕುಮಾರ್ ನಡೆಗೆ ರಾಜ್ಯಪಾಲ ವಜುಬಾಯ್ ವಾಲಾ ಗರಂ ಆಗಿದ್ದಾರೆ ಎಂದು ಸಹ ತಿಳಿದುಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top