fbpx
ಸಮಾಚಾರ

ನಾಳಿನ ಇಂಡೋ-ಕಿವೀಸ್ ಸೆಮೀಸ್ ಕದನಕ್ಕೆ ಅಂಪೈರ್ ಗಳು ಯಾವ ದೇಶದವರು ಗೊತ್ತಾ?

ವಿಶ್ವಕಪ್​ ಸೆಮಿಫೈನಲ್​ಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ಮ್ಯಾಂಚೆಸ್ಟರ್​ನಲ್ಲಿ ಭಾರತ-ನ್ಯೂಜಿಲೆಂಡ್​ ತಂಡಗಳು ಸೆಣೆಸುತ್ತಿವೆ. ಈ ಪಂದ್ಯಕ್ಕಾಗಿ ಉಭಯ ದೇಶದ ಕೋಟ್ಯಾಂತರ ಜನ ಕಾದು ಕೂತಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಈಗಾಲೇ ಈ ಪಂದ್ಯದ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

 

 

ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಭಾರತ-ನ್ಯೂಜಿಲೆಂಡ್ ವಿರುದ್ಧದ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಇಂಗ್ಲೆಂಡ್‌ನ ರಿಚರ್ಡ್ ಇಲ್ಲಿಂಗ್‌ವರ್ತ್ ಮತ್ತು ರಿಚರ್ಡ್ ಕೆಟಲ್‌ಬೊರೌ ಅಂಪೈರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ಆಸ್ಟ್ರೇಲಿಯಾದ ರಾಡ್ ಟಕ್ಕರ್ 3ನೇ ಅಂಪೈರ್ ಆಗಿ, ಇಂಗ್ಲೆಂಡ್‌ನ ನಿಗಿಲ್ ಲಾಂಗ್ 4ನೇ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ಬೂನ್ ಪಂದ್ಯ ರೆಫ್ರಿಯಾಗಿದ್ದಾರೆ.

ಮಳೆ ಸಾಧ್ಯತೆ:
ಈ ಪಂದ್ಯಕ್ಕೆ ಮಳೆಯ ಕಾಟ ಎದುರಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ಮ್ಯಾಂಚೆಸ್ಟರ್‌ನಲ್ಲಿ ನಾಳೆಯಿಂದ ಶನಿವಾರದ ವರೆಗೂ ಸತತವಾಗಿ ಮಳೆ ಬೀಳುವ ಮುನ್ಸೂಚನೆ ಇದೆ. ಹೀಗಾಗಿ ಪಂದ್ಯ ಆರಂಭಗೊಂಡರೂ, ಪದೇ ಪದೇ ಮಳೆಯಿಂದಾಗಿ ಸ್ಥಗಿತಗೊಳ್ಳಬಹುದು. ಓವರ್‌ಗಳು ಕಡಿತಗೊಳ್ಳುವ ಸಾಧ್ಯತೆ ಹೆಚ್ಚು, ಪೂರ್ಣ ಪಂದ್ಯ ನಿರೀಕ್ಷೆ ಮಾಡುವುದು ಕಷ್ಟಎಂದು ಸ್ಥಳೀಯ ಆಯೋಜಕರು ಮಾಹಿತಿ ನೀಡಿದ್ದಾರೆ..

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top