fbpx
ಸಮಾಚಾರ

ಬೆಳಗಾವಿಯಲ್ಲಿ ಇನ್ನು ಮುಂದೆ ಕನ್ನಡದಲ್ಲಿ ಮಾತ್ರವೇ ಬ್ಯಾಂಕ್ ವ್ಯವಹಾರ” ಜಿಲ್ಲಾಧಿಕಾರಿ ಡಾ. S.B ಬೊಮ್ಮನಹಳ್ಳಿ ಖಡಕ್ ಆದೇಶ

ಬ್ಯಾಂಕ್‌ಗಳಲ್ಲಿ ಕರಾರು ಪತ್ರ, ಲೋನ್‌ ಅರ್ಜಿ, ರಸೀದಿಗಳು ಅನ್ಯ ಭಾಷೆಯಲ್ಲಿವೆ. ರೈತರಿಂದ ಕರಾರು ಪತ್ರವನ್ನು ಆಂಗ್ಲ ಭಾಷೆಯಲ್ಲಿ ಪಡೆದುಕೊಳ್ಳಲಾಗುತ್ತಿದೆ. ಪತ್ರದಲ್ಲಿನ ವಿಷಯ ರೈತರಿಗೆ ತಿಳಿಯುವುದಿಲ್ಲ. ಆದ್ದರಿಂದ ಕಡ್ಡಾಯವಾಗಿ ಬ್ಯಾಂಕ್‌ನ ಎಲ್ಲ ವ್ಯವಹಾರಗಳು ಕನ್ನಡದಲ್ಲಿ ನಡೆಯಬೇಕು. ಒಂದು ತಿಂಗಳಲ್ಲಿ ಇದು ಅನುಷ್ಠಾನಕ್ಕೆ ಬರಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಅವರು ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಇಂಗ್ಲಿಷ್‌ನಲ್ಲಿರುವ ಕರಾರುಪತ್ರ ಹಾಗೂ ರಸೀದಿ ಪತ್ರಗಳಿಗೆ ರೈತರಿಗೆ ತಿಳಿಸದೇ ಸಹಿ ಮಾಡಿಸಿಕೊಳ್ಳಲಾಗುತ್ತಿದೆ. ಇದರಿಂದ ಕಾನೂನು ತೊಡಕು ಎದುರಾಗುತ್ತಿರುವ ಪ್ರಕರಣಗಳು ಕಂಡುಬಂದಿವೆ. ಹೀಗಾಗಿ, ಕನ್ನಡದಲ್ಲೇ ವ್ಯವಹಾರ ನಡೆಸಬೇಕು. ಒಂದು ವೇಳೆ ಕಾನೂನು ತೊಡಕು ಎದುರಾದರೇ ಅದಕ್ಕೆ ಬ್ಯಾಂಕುಗಳನ್ನೇ ಹೊಣೆಯಾಗಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಜ್ಞಾನಪೀಠ ಪುರಸ್ಕೃತರ ಫೋಟೋ ಹಾಕಿ:
ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳನ್ನು ಅಳವಡಿಸಲು ಕ್ರಮಕೈಗೊಳ್ಳಬೇಕು. ಖಾನಾಪುರ ಸೇರಿದಂತೆ ಗಡಿಭಾಗ ಕನ್ನಡ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಆಗದಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು.” ಎಂದು ಕೂಡ ಜಿಲ್ಲಾಧಿಕಾರಿಗಳು ಹೇಳಿದರು.

ಕನ್ನಡ ಫಲಕ:
ಇದೆ ವೇಳೆ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಮೇಯರ್‌ ಸಿದ್ದನಗೌಡ ಪಾಟೀಲ, ”ಜಾಹೀರಾತು ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಬಗ್ಗೆ ಪ್ರತಿ ಸಭೆಯಲ್ಲೂ ಚರ್ಚೆ ನಡೆಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು”, ಎಂದು ಒತ್ತಾಯಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top