fbpx
ಸಮಾಚಾರ

ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಹೃದಯಾಘಾತ- ನಾಗೇಂದ್ರ ಆಸ್ಪತ್ರೆಗೆ ದಾಖಲು

ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ ಅವರು ಗಂಭೀರ ಹೃದಯ ಸಮಸ್ಯೆಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಎರಡು ದಿನಗಳ ಹಿಂದೆಯೇ ನಾಗೇಂದ್ರ ಗಂಭೀರ ಹೃದಯಾಘಾತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರು ಸೋಮವಾರ ಸದನಕ್ಕೆ ಹಾಜರಾಗುವ ಸಾಧ್ಯತೆ ಕಡಿಮೆ. ಆದರೆ ಮೈತ್ರಿ ಸರಕಾರದ ಪರ ಇರುತ್ತೇನೆ ಎಂದು ನಾಗೇಂದ್ರ ಸಿಎಂ ಕುಮಾರಸ್ವಾಮಿಯವರಿಗೆ ಈಗಾಗಲೇ ಭರವಸೆ ನೀಡಿದ್ದಾರೆ.

ಬಿ. ನಾಗೇಂದ್ರ ಅವರ ಆರೋಗ್ಯ ವಿಚಾರಿಸುವ ವೇಳೆಯಲ್ಲೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ ನಡೆಯಬಹುದಾದ ವಿಶ್ವಾಸಮತ ಯಾಚನೆ ವೇಳೆ ಹಾಜರಾಗಲು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಮಧ್ಯದಲ್ಲೇ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿರುವುದು ಕುತೂಹಲಕ್ಕೆ ಎಡಮಾಡಿಕೊಟ್ಟಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top