fbpx
ಸಿನಿಮಾ

ಅಂಬರೀಷ್ ಅವರ ಕೊನೆಯ ಚಿತ್ರ ‘ಕುರುಕ್ಷೇತ್ರ’ ನೋಡೋಕೆ ಕಾತುರದಿಂದ ಕಾಯ್ತಿದ್ದಾರಂತೆ ಸುಮಲತಾ

ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರದ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು ಸಕ್ಕತ್ ಸಂಚಲನವನ್ನು ಸೃಷ್ಟಿ ಮಾಡುತ್ತಿದೆ, ದರ್ಶನ್ 50ನೇ ಸಿನಿಮಾ ಹಾಗೂ ಒಂದು ಬಿಗ್ ಬಜೆಟ್ ಪೌರಾಣಿಕ ಸಿನಿಮಾ ಎಂಬ ಕಾರಣಕ್ಕೆ ‘ಕುರುಕ್ಷೇತ್ರ’ ಟ್ರೇಲರ್ ಬಗ್ಗೆ ದೊಡ್ಡ ನಿರೀಕ್ಷೆ ಸಹಜವಾಗಿಯೇ ಇದೆ, ಚಿತ್ರತಂಡದ ಆಪ್ತವಲಯದ ಪ್ರಕಾರ ಕುರುಕ್ಷೇತ್ರ ಚಿತ್ರದ ಮತ್ತೊಂದು ಟ್ರೈಲರ್ ಆಗಸ್ಟ್ 12ರಂದು ಬಿಡುಗಡೆಯಾಗುತ್ತಿದೆ. ಅಂದಹಾಗೆ ಈ ಟ್ರೈಲರ್ ಅನ್ನು ಎಲ್ಲಾ ಐದೂ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುತ್ತದೆಯಂತೆ.

ಬಹುನಿರೀಕ್ಷಿತ ‘ಕುರುಕ್ಷೇತ್ರ’ ಸಿನಿಮಾ ಆಗಸ್ಟ್ 2, 2019ರಂದು ಬಿಡುಗಡೆಯಾಗಲಿದೆ. ಬಹುತಾರಾಗಣವನ್ನು ಹೊಂದಿರುವ ‘ಕುರುಕ್ಷೇತ್ರ’ ಚಿತ್ರವನ್ನು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್ ಅವರು ನೋಡಲು ಕಾತುರದಿಂದ ಕಾಯುತ್ತಿರುವುದಾಗಿ ತಿಳಿಸಿದ್ದಾರೆ, ಅಂಬರೀಷ್ ಅವರ ಕೊನೆಯ ಚಿತ್ರ ಹಾಗು ದರ್ಶನ್ 50ನೇ ಸಿನಿಮಾ ಎಂಬ ಕಾರಣಕ್ಕೆ ನಿರೀಕ್ಷೆಯ ಮಟ್ಟ ಬಹಳವಾಗಿದೆ.

ತಮ್ಮ ಟ್ವಿಟರ್ ಖಾತೆಯಲ್ಲಿ “ನಾನು ‘ಕುರುಕ್ಷೇತ್ರ’ ಚಿತ್ರದಲ್ಲಿ ದುರ್ಯೋಧನ ಹಾಗೂ ಭೀಷ್ಮ ಪಾತ್ರಧಾರಿಗಳನ್ನು ಒಟ್ಟಿಗೇ ತೆರೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿರುವೆ” ಎಂದು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿರುವ ತಮ್ಮ ಹೇಳಿಕೆಯ ಟ್ವೀಟ್‌ಅನ್ನು ನಟ ದರ್ಶನ್ ಅವರಿಗೂ ಸಹ ಸುಮಲತಾ ಅಂಬರೀಷ್ ಅವರು ಟ್ಯಾಗ್ ಮಾಡಿದ್ದಾರೆ.

ಕುರುಕ್ಷೇತ್ರ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಿತ್ರವಾಗಿದ್ದು ಚಿತ್ರದಲ್ಲಿ ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಷ್, ಸೋನು ಸೂದ್, ಡ್ಯಾನಿಶ್ ಅಖ್ತರ್ ಸೈಫಿ, ನಿಖಿಲ್ ಕುಮಾರ್, ರವಿಶಂಕರ್, ಮೇಘನಾ ರಾಜ್, ಭಾರತೀ ವಿಷ್ಣುವರ್ಧನ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಭಾರೀ ಬಜೆಟ್‌ನ ಕುರುಕ್ಷೇತ್ರದ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆಗಳು ಹುಟ್ಟಿಕೊಂಡಿವೆ. ಕರ್ನಾಟಕ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ಕನ್ನಡದ ಕುರುಕ್ಷೇತ್ರ ಸದ್ದು ಮಾಡುತ್ತಿದೆ. ಕುರುಕ್ಕ್ಷೇತ್ರ ಚಿತ್ರಕ್ಕೆ ಭಾರತೀಯ ಮಹಾಕಾವ್ಯ ಮಹಾಭಾರತವನ್ನು ಆಧರಿಸಿ ಜೆ.ಕೆ. ಭಾರವಿಯವರು ಬರೆದಿದ್ದಾರೆ..ಸಿನಿಮಾವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು ವಿ.ಹರಿಕೃಷ್ಣ ಚಿತ್ರಕ್ಕೆ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top