fbpx
ಸಮಾಚಾರ

ಆಗಸ್ಟ್ 29ಕ್ಕೆ ‘ಪೈಲ್ವಾನ್’ ರಿಲೀಸ್​ ಆಗಲ್ಲ- ರಿಲೀಸ್ ಡೇಟ್ ಮತ್ತೆ ಮುಂದಕ್ಕೆ.

ಕಿಚ್ಚ ಸುದೀಪ್ ಬಹುನಿರೀಕ್ಷಿತ ಚಿತ್ರ ‘ಪೈಲ್ವಾನ್’ ಚಿತ್ರ ರಿಲೀಸ್ ಗೊಂದಲ ಬಗೆಹರಿಯುವ ಲಕ್ಷಣವೇ ಕಾಣಿಸುತ್ತಿಲ್ಲ. ಮೊದಲು ಆಗಸ್ಟ್ 8 ಕ್ಕೆ ರಿಲೀಸ್ ಆಗುವುದೆಂದು ತಿಳಿಸಲಾಗಿತ್ತು. ಆನಂತರ ಅದನ್ನು ಆಗಸ್ಟ್ 29ಕ್ಕೆ ಮುಂದೂಡಲಾಗಿತ್ತು ಇದೀಗ ಮತ್ತೆ ರಿಲೀಸ್ ಡೇಟ್ ಪೋಸ್ಟ್ ಆಗಿದೆ. ರಿಲೀಸ್ ಡೇಟ್ ಮುಂದಕ್ಕೆ ಹೋಗಿರುವುದರ ಬಗ್ಗೆ ನಿರ್ದೇಶಕ ಕೃಷ್ಣ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

 

 

ಪೈಲ್ವಾನ್ ರಿಲೀಸ್​ ಡೇಟನ್ನು ಮುಂದೂಡಲಾಗುತ್ತಿದೆ. ಅಷ್ಟೇ ಅಲ್ಲದೆ ಚಿತ್ರದುರ್ಗದಲ್ಲಿ ನಡೆಯಬೇಕಿದ್ದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ಕೂಡ ಮುಂದೂಡಲಾಗುವುದು. ಯಾವತ್ತು ಆಡಿಯೋ ಲಾಂಚ್ ಮತ್ತು ಮೂವಿ ರಿಲೀಸ್ ಮಾಡಲಾಗುತ್ತೆ ಅನ್ನೋದನ್ನು ಜುಲೈ 22ರ ಸಂಜೆ (ಇಂದು) 6.30ಕ್ಕೆ ಅನೌನ್ಸ್ ಮಾಡುವುದಾಗಿ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ನಡೆಯಬೇಕಿದ್ದ ಚಿತ್ರದ ಆಡಿಯೋ ಕಾರ್ಯಕ್ರಮದ ಜತೆಗೆ ಸಿನಿಮಾದ ಬಿಡುಗಡೆ ದಿನಾಂಕವೂ ಮುಂದೂಡಲಾಗಿದೆ. ಇದಕ್ಕೆ ಪ್ರಮುಖ ಕಾರಣ ಐದು ಭಾಷೆಗಳಲ್ಲಿ ‘ಪೈಲ್ವಾನ್​’ ಬಿಡುಗಡೆಯಾಗುತ್ತಿರುವುದು. ಅದರಲ್ಲೂ ಹಿಂದಿ ಹಾಗೂ ತೆಲುಗು ಭಾಷೆಯಲ್ಲಿ ಮತ್ತಷ್ಟು ಕೆಲಸಗಳು ಬಾಕಿ ಇದೆ. ಸಿನಿಮಾ ದಿನಾಂಕ ಸೇರಿದಂತೆ ಆಡಿಯೋ ಬಿಡುಗಡೆ ಕಾರ್ಯಕ್ರಮದ ದಿನಾಂಕ ಇಂದು ಸಂಜೆ ಪ್ರಕಟಿಸುವುದಾಗಿ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಪೈಲ್ವಾನ್ ಬಗ್ಗೆ:
ಪೈಲ್ವಾನ್ ಚಿತ್ರದ ಬಗ್ಗೆ ಹೇಳಬೇಕೆಂದರೆ ಮುಂಬೈ ಬೆಡಗಿ ಆಕಾಂಕ್ಷ ಸಿಂಗ್ ಸುದೀಪ್’ಗೆ ನಾಯಕಿಯಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಬಾಲಿವುಡ್ ನಟ ಸುನಿಲ್ ಶೆಟ್ಟಿ, ಕರುಣ್ ದುಹಾನ್ ಸಿಂಗ್, ಸುಶಾಂತ್ ಸಿಂಗ್, ಅವಿನಾಶ್ ಸೇರಿದಂತೆ ಹಲವಾರು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. RRR ಮೋಶನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ತಯಾರಾಗುತ್ತಿರುವ ಪೈಲ್ವಾನ್ ಚಿತ್ರವನ್ನು ನಿರ್ದೇಶಕ ಕೃಷ್ಣಾ ಅವರ ಪತ್ನಿ ಸ್ವಪ್ನ ಕೃಷ್ಣಾ ನಿರ್ಮಾಣ ಮಾಡುತ್ತಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮತ್ತು ಕರುಣಾಕರ್ ಅವರ ಕ್ಯಾಮೆರಾ ಕೈಚಳಕ ಚಿತ್ರಕ್ಕಿರಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top