fbpx
ಸಮಾಚಾರ

ನಾವು ಚುನಾವಣೆಯಲ್ಲಿ ಗೆದ್ದಿದ್ದು ಶೌಚಾಲಯ, ಚರಂಡಿ ಸ್ವಚ್ಛ ಮಾಡಲು ಅಲ್ಲ- ಮೋದಿ ಯೋಜನೆಗೆ ಪ್ರಜ್ಞಾ ಅಪಸ್ವರ!

ಒಂದೆಡೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತ ದೇಶದ ಅತಿದೊಡ್ಡ ಸ್ವಚ್ಛತಾ ಆಂದೋಲನ ಎಂದೇ ಪರಿಗಣಿತವಾದ ‘ಸ್ವಚ್ಛ ಭಾರತ ಅಭಿಯಾನ’ಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ.

ಆದರೆ, ಆಡಳಿತಾರೂಢ ಬಿಜೆಪಿಯ ನೂತನ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು, ತಾನು ಶೌಚಾಲಯಗಳು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವ ಸಲುವಾಗಿ ಸಂಸದೆಯಾಗಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ ಅಭಿಯಾನಕ್ಕೆ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ಪ್ರದೇಶದಲ್ಲಿ ಹೆಚ್ಚು ನೈರ್ಮಲ್ಯವಿದ್ದು ಸ್ವಚ್ಛತೆಯ ಕೊರತೆ ಇದೆ ಎಂದು ಹೇಳಿಕೊಂಡಿದ್ದಾರೆ. ಇದಕ್ಕೆ ಉತ್ತರಿಸಿದ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ನಿಮ್ಮ ಶೌಚಾಲಯ, ಚರಂಡಿ ಸ್ವಚ್ಛಗೊಳಿಸುವುದು ನನ್ನ ಕೆಲಸವಲ್ಲ ಎಂದು ಕಿಡಿಕಾರಿದ್ದಾರೆ.

ಸೆಹೋರೆಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡುವ ವೇಳೆ ಈ ರೀತಿ ಹೇಳಿದ್ದು, ನಾನು ಚರಂಡಿ ಹಾಗೂ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಆಯ್ಕೆಯಾಗಿಲ್ಲ ಅರ್ಥ ಮಾಡಿಕೊಳ್ಳಿ. ನಾನು ಯಾವ ಕೆಲಸ ಮಾಡಲು ಚುನಾಯಿತಳಾಗಿದ್ದೇನೆ ಎನ್ನುವುದು ತಿಳಿದಿದೆ. ಆ ಕೆಲಸವನ್ನು ನಾನು ಮಾಡುತ್ತೇನೆ, ಈ ಕುರಿತು ಹಲವು ಬಾರಿ ಹೇಳಿದ್ದೇನೆ ಎಂದು ಆಕ್ರೋಶ ಭರಿತರಾಗಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top