fbpx
ಸಮಾಚಾರ

ನಗರಾದ್ಯಂತ ಸೆಕ್ಶನ್ 144 ಜಾರಿ – ಇಂದಿನಿಂದ ಬೆಂಗಳೂರು ನಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಪ್ರಸಕ್ತ ನಡೆಯುತ್ತಿರುವ ರಾಜಕೀಯಬಿಕ್ಕಟ್ಟಿನಿಂದ ತಲೆದೋರಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ.

 

 

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಮಂಗಳವಾರ ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡುತ್ತಿದ್ದು, 5 ಜನಕ್ಕಿಂತ ಜಾಸ್ತಿ ಜನ ಒಂದು ಕಡೆ ಸೇರುವಂತಿಲ್ಲ, ಪ್ರತಿಭಟನೆ ಮಾಡುವಂತಿಲ್ಲ ಎಂದು ತಿಳಿಸಿದರು.

ಈಗಾಗಲೇ ವಿಧಾನಸಭೆ ಬಳಿ ಸೆ.144 ಜಾರಿಯಲ್ಲಿದ್ದು, ಈಗ ಆದೇಶವನ್ನು ಇಡೀ ನಗರಕ್ಕೆ ಅನ್ವಯಿಸಲಾಗಿದೆ ಎಂದು ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುತ್ತಿದ್ದು, ಸರ್ಕಾರ ಬಿದ್ದರೆ ಎದುರಾಗಬಹುದಾದ ಪರಿಸ್ಥಿತಿಯನ್ನು ನಿಭಾಯಿಸಲು ನಗರ ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top