fbpx
ಸಮಾಚಾರ

ಮಂಡ್ಯ ಸಂಸದೆ ಸುಮಲತಾ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸರ್ಕಾರ!

ಮಂಡ್ಯದ ಕಾಲುವೆ ಗಳಿಗೆ ಕೃಷ್ಣರಾಜಸಾಗರ ಅಣೆಕಟ್ಟಿನಿಂದ ನೀರು ಹರಿಸುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಾಡಿಕೊಂಡಿದ್ದ ಮನವಿಯನ್ನು ಸೂಕ್ತ ಕ್ರಮಕ್ಕಾಗಿ ಜಲ ಶಕ್ತಿ ಸಚಿವಾಲಯದ ಕಾರ್ಯದರ್ಶಿಗಳಿಗೆ ಕಳುಹಿಸಿಕೊಟ್ಟಿರುವುದಾಗಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಕೆಆರ್​ಎಸ್​ ಡ್ಯಾಂನಿಂದ ಮಂಡ್ಯದ ನಾಲೆಗಳಿಗೆ ನೀರು ಹರಿಸಲು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಒಪ್ಪಿಗೆ ಸೂಚಿಸಿದ್ದಾರೆ.

 

 

ಈ ವಿಚಾರವನ್ನು ಸುಮಲತಾ ಅಂಬರೀಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಿಳಿಸಿದ್ದು, ಕೇಂದ್ರ ಜಲಾನಯನ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ನನ್ನ ತುಂಬು ಹೃದಯದ ಅಭಿನಂದನೆಗಳು. ನನ್ನ ಮನವಿಗೆ ಸ್ಪಂದಿಸಿ ನೀರನ್ನು ಮಂಡ್ಯ ನಾಲೆಗೆ ಹರಿಸಲು ಆದೇಶಿಸಿದ ನಿಮಗೆ ಮಂಡ್ಯ ರೈತರ ಪರವಾಗಿ ನನ್ನ ತುಂಬು ಹೃದಯದ ಅಭಿನಂದನೆಗಳು ಎಂದು ಪೋಸ್ಟ್ ಮಾಡಿದ್ದಾರೆ.

ಸುಮಲತಾ ಅಂಬರೀಷ್ ಅವರು ಜೂನ್ 20 ರಂದು ಪತ್ರ ಬರೆದು ಮಂಡ್ಯದ ಕೃಷ್ಣರಾಜಸಾಗರ ಜಲಾಶಯದಿಂದ ಮಂಡ್ಯದ ಕಾಲುವೆಗಳಿಗೆ 2 ಟಿಎಂಸಿ ನೀರು ನೀಡುವಂತೆ ಕೋರಿ ಪತ್ರ ಬರೆದಿದ್ದರು. ಈಗ ಅವರ ಮನವಿಗೆ ಪುರಸ್ಕಾರ ಸಿಕ್ಕಿರುವುದರಿಂದ ಹರ್ಷ ವ್ಯಕ್ತಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top