fbpx
ಸಮಾಚಾರ

ಸಿಎಂ ಹುದ್ದೆ ನಂತರ ಎಚ್.ಡಿ. ಕುಮಾರಸ್ವಾಮಿ ಕೈತಪ್ಪಿದ ಮತ್ತೊಂದು ಸ್ಥಾನ.

ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದ ಎಚ್.ಡಿ ಕುಮಾರಸ್ವಾಮಿ ಸದ್ಯ ಸಿಎಂ ಹುದ್ದೆ ಕಳೆದುಕೊಂಡಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುಮಾರಸ್ವಾಮಿ ಈ ಮೂಲಕ ಮತ್ತೊಂದು ಹುದ್ದೆಯನ್ನು ಕೂಡ ಕಳೆದುಕೊಂಡಿದ್ದಾರೆ.. ಯಾವುದದು ಅಂತೀರಾ? ಮುಂದೆ ಓದಿ.

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪ್ರತಿಪಕ್ಷದ ನಾಯಕನ ಸ್ಥಾನವನ್ನೂ ಅಲಂಕರಿಸುವ ಸಾಧ್ಯತೆ ಬಹಳ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ. ಸಂಖ್ಯಾಬಲದಲ್ಲಿ ಜೆಡಿಎಸ್ ಗಿಂತಲೂ ಕಾಂಗ್ರೆಸ್‌ ದೊಡ್ಡ ಪಕ್ಷವಾಗಿರುವುದರಿಂದ ಪ್ರತಿಪಕ್ಷದ ನಾಯಕನ ಸ್ಥಾನ ಸಹಜವಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದೆ.

ಒಂದು ವೇಳೆ ಉಭಯ ಪಕ್ಷಗಳು ಮೈತ್ರಿ ಕೂಟ ಮುಂದುವರೆಸಿ ಜಂಟಿಯಾಗಿ ತಮ್ಮ ನಾಯಕನನ್ನಾಗಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿಕೊಂಡು ಸ್ಪೀಕರ್‌ಗೆ ಪತ್ರ ಬರೆದು ಕೊಟ್ಟಲ್ಲಿ ಮಾತ್ರ ಪ್ರತಿಪಕ್ಷದ ನಾಯಕನ ಸ್ಥಾನ ಕುಮಾರಸ್ವಾಮಿ ಅವರಿಗೆ ಸಿಗಬಹುದು. ಇಲ್ಲದಿದ್ದರೆ ಜೆಡಿಎಸ್‌ ಶಾಸಕಾಂಗ ನಾಯಕರಾಗಿ ಮಾತ್ರ HDK ಮುಂದುವರೆಯುತ್ತಾರೆ. ಸದ್ಯದ ಸನ್ನಿವೇಶದಲ್ಲಿ ಮೈತ್ರಿ ಕೂಟ ಆ ಮಟ್ಟಕ್ಕೆ ಮುಂದುವರೆಯುವ ಸಾಧ್ಯತೆ ಇಲ್ಲವೇ ಇಲ್ಲ ಎಂದು ಹೇಳಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top