fbpx
ಸಮಾಚಾರ

ಬ್ರಿಟನ್ ಗೃಹ ಕಾರ್ಯದರ್ಶಿಯಾಗಿ ಭಾರತೀಯ ಮೂಲದ ಮಹಿಳೆ ನೇಮಕ.

ಭಾರತೀಯ ಮೂಲದ ಪ್ರೀತಿ ಪಟೇಲ್ ಅವರು ಲಂಡನ್‍ನಲ್ಲಿ ಗೃಹ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಇಂಗ್ಲೆಂಡ್ ನಲ್ಲಿ ಗೃಹ ಕಾರ್ಯದರ್ಶಿಯಾದ ಮೊದಲ ಭಾರತೀಯ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 47 ವರ್ಷದ ಪ್ರೀತಿ ಪಟೇಲ್ ಈ ಹಿಂದೆ ಇಂಟರ್ ನ್ಯಾಶನಲ್ ಡೆವಲಪ್ ಮೆಂಟ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದು ಬೋರಿಸ್ ಜಾನ್ಸನ್ ಅವರ ನಾಯಕತ್ವ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

 

 

ಇಂಗ್ಲೆಂಡ್ ನಲ್ಲಿ ಹೊಸದಾಗಿ ಅನಾವರಣಗೊಂಡ ಬೋರಿಸ್ ಜಾನ್ಸನ್ ಅವರ ಸಚಿವ ಸಂಪುಟದಲ್ಲಿ ಥೆರೆಸಾ ಮೇ ಅವರ ಬ್ರೆಕ್ಸಿಟ್ ಕಾರ್ಯತಂತ್ರದ ಬಗ್ಗೆ ತೀವ್ರವಾಗಿ ಟೀಕಿಸಿದ ಪ್ರೀತಿ ಪಟೇಲ್ ಅವರನ್ನು ಬ್ರಿಟನ್‍ನ ಮೊದಲ ಭಾರತೀಯ ಮೂಲದ ಗೃಹ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

ಇವರು ಉದ್ಯೋಗ ಖಾತೆ ರಾಜ್ಯ ಸಚಿವೆಯಾಗಿಯೂ ಸೇವೆಸಲ್ಲಿಸಿದ್ದಾರೆ. ಇವರು ಅರ್ಥಶಾಸ್ತ್ರ ವಿಷಯದಲ್ಲಿ ಪದವಿ ಹಾಗೂ ಬ್ರಿಟಿಷ್‌ ಸರಕಾರ ಮತ್ತು ರಾಜಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿದ್ಯಾಭ್ಯಾಸ ಮುಗಿಸಿ ಕೆಲ ವರ್ಷ ಖಾಸಗಿ ಕಂಪನಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಕೆಲಸ ಮಾಡಿದರು. 2005ರಲ್ಲಿ ಉತ್ತರ ನಾಟಿಂಗ್‌ಹ್ಯಾಮ್‌ ಎಂಪಿ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿಸುವ ಮೂಲಕ ರಾಜಕೀಯ ಜೀವನಕ್ಕೆ ಪದಾರ್ಪಣೆ ಮಾಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top