fbpx
ಸಮಾಚಾರ

ಕನ್ನಡಿಗರ ಚಪ್ಪಾಳೆಯಿಂದಲೇ ನೀವು ಬೆಳೆದಿದ್ದು: ಸ್ಟಾರ್ ನಟಿ ರಶ್ಮಿಕಾಗೆ ತಿವಿದ ಜಗ್ಗೇಶ್.

ಕನ್ನಡ ಮೂಲದ ನಟಿ, ಟಾಲಿವುಡ್ ಸ್ಟಾರ್ ನಟಿಯಾಗಿ ಬೆಳೆದಿರುವ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ತಮಿಳು ಚಾನೆಲ್ ಒಂದರ ಸಂದರ್ಶನದಲ್ಲಿ ಮಾತನಾಡಿ ಕನ್ನಡ ಸಿನಿಮಾಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಶ್ಮಿಕಾ ಅವರು ತಮಿಳು ಸಂದರ್ಶನದಲ್ಲಿ “ನನಗೆ ಕನ್ನಡ ಸರಿಯಾಗಿ ಬರಲ್ಲ. ಅಲ್ಲದೇ ಕನ್ನಡ ಮಾತಾಡೋದು ತುಂಬಾನೇ ಕಷ್ಟ” ಎಂದು ತಮಿಳಿನಲ್ಲಿಯೇ ಹೇಳಿಕೆ ನೀಡಿದ್ದಾರೆ. ಇದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ.

 

 

 

 

ಇದೀಗ ಇದೆ ವಿಚಾರವಾಗಿ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ವಿರುದ್ಧ ನವರಸ ನಾಯಕ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಜಗ್ಗೇಶ್ “ಕನ್ನಡ ಚಿತ್ರರಂಗದ ಆಶೀರ್ವಾದ ಪಡೆದು ಬೆಳೆದು ಪರಭಾಷೆಗೆ ಹೋಗಿ ಅಲ್ಲಿಯು ಬೆಳೆದ ಅನೇಕ ಸ್ನೇಹಿತರಿದ್ದಾರೆ! ಅವರೆಲ್ಲ ಇಂದು ಕನ್ನಡಲ್ಲೆ ಮಾತಾಡಿ ಕನ್ನಡವನ್ನ ಅಪಾರ ಗೌರವಿಸುತ್ತಾರೆ ಅದು ಅವರ ಕನ್ನಡದ ಸಂಸ್ಕೃತಿ! ಆಗುಣವಿರದ ಇಂದಿನ ಪೀಳಿಗೆಯ ನಡಾವಳಿ ದುರಾದೃಷ್ಟಕರ ನಡೆ!ಕನ್ನಡ ಪ್ರೇಕ್ಷಕನ ಚಪ್ಪಾಳೆ ಬಿದ್ದೆ ನಿಮ್ಮ ಬೆಳವಣಿಗೆ ಆದದ್ದುನೆನಪಿರಲಿ!” ಎಂದು ಬರೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫಿಲಂ ಚೇಂಬರ್ ನಲ್ಲಿ ದೂರು:
ರಶ್ಮಿಕಾ ಮಂದಣ್ಣ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದೆ. ಒಕ್ಕೂಟದ ಸದಸ್ಯರು ಸೋಮವಾರ ಬೆಳಗ್ಗೆ ವಾಣಿಜ್ಯ ಮಂಡಳಿ ಮುಂಭಾಗ ಪ್ರತಿಭಟನೆ ನಡೆಸಿ, ರಶ್ಮಿಕಾ ಮಂದಣ್ಣ ನಟನೆಯ ಚಿತ್ರಗಳು ರಾಜ್ಯದಲ್ಲಿ ಬಿಡುಗಡೆ ಆಗದಂತೆ ನಿಷೇಧ ಹೇರಬೇಕೆಂದು ಆಗ್ರಹಿಸಿದರು.

‘ಕನ್ನಡದಿಂದಲೇ ನಟಿಯಾಗಿ ಬೆಳೆದ ರಶ್ಮಿಕಾ ಮಂದಣ್ಣ, ಪರಭಾಷೆಗಳಲ್ಲಿ ತಮಗೆ ಅವಕಾಶಗಳಿವೆ ಎನ್ನುವ ಕಾರಣಕ್ಕೆ ಕನ್ನಡಕ್ಕೆ ಅವಮಾನ ಮಾಡುತ್ತಿದ್ದಾರೆ’ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top