fbpx
ಸಮಾಚಾರ

ರೋಹಿತ್ ಶರ್ಮಾ ಜತೆ ಮನಸ್ತಾಪದ ಬಗ್ಗೆ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಗೆ ಕೊಹ್ಲಿ ವಿಶ್ರಾಂತಿ ತೆಗೆದುಕೊಳ್ಳಲು ಬಯಸಿದ್ದರು ಕೂಡ ತಮ್ಮ ಅನುಪಸ್ಥಿತಿಯಲ್ಲಿ ರೋಹಿತ್‍ಗೆ ನಾಯಕತ್ವದ ನೀಡುವುದರಿಂದ ಕೊಹ್ಲಿ ಟೂರ್ನಿಗೆ ಬಂದಿದಾರೆ ಎಂದು ಮಾಧ್ಯಮವೊಂದು ವರದಿ ಮಾಡಿತ್ತು. ಆದರೆ ಈ ವರದಿಯನ್ನು ಟೀಂ ಇನಿಯ ನಾಯಕ ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ.

 

 

ಈ ಬಗ್ಗೆ ಪ್ರತಿಕ್ರಿಯಿಸಿದ ಕೊಹ್ಲಿ, ಈ ರೀತಿಯ ಸುದ್ದಿಗಳನ್ನು ಓದಿ ನಾನು ದಿಗ್ಭ್ರಮೆಗೊಂಡಿದ್ದೇನೆ. ನಾವು ಯಾವ ರೀತಿ ಆಡಿದ್ದೇವೆ ಎಂಬುದರ ಬಗ್ಗೆ ಜನರು ಮಾತನಾಡುತ್ತಾರೆ. ಆದರೆ ಇಲ್ಲಿ ಸುಳ್ಳು ಸುದ್ದಿ ಹಬ್ಬುತ್ತಾ ಋಣಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಕೊಹ್ಲಿ ಹೇಳಿದ್ದಾರೆ.

‘ನಮ್ಮ ಡ್ರೆಸ್ಸಿಂಗ್ ರೂಮ್​ನಲ್ಲಿ ತೊಂದರೆಗಳಿವೆ ಎಂದಾದರೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಿಲ್ಲ. ಆದರೆ, ಕೆಲವರು ನಮ್ಮನ್ನು ತುಳಿಯಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಹಾಗೂ ರೋಹಿತ್ ನಡುವಣ ಸ್ನೇಹವನ್ನು ಎಲ್ಲರೂ ನೋಡಿದ್ದಾರೆ. ನಮ್ಮಿಬ್ಬರ ನಡುವೆ ಯಾವುದೆ ಬಿರುಕಿಲ್ಲ’ ಎಂದು ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇನ್ನು ತಂಡದ ಬಗ್ಗೆ ಮಾತನಾಡಿದ ಕೊಹ್ಲಿ, ‘ವಿಶ್ವಕಪ್​ ಸೋಲಿನ ಆಘಾತದಿಂದ ಹೊರಬರಲಿದ್ದೇವೆ. ಮುಂಬರುವ ಕ್ರಿಕೆಟ್​​ ಸರಣಿ ಯುವಕರಿಗೆ ಉತ್ತಮ ವೇದಿಕೆಯಾಗಲಿದೆ. ಮುಂದಿನ ವರ್ಷ ಟಿ-20 ವಿಶ್ವಕಪ್ ನಡೆಯಲಿದೆ. ಇದಕ್ಕಾಗಿ ಪ್ರತಿಭಾವಂತ ಯುವ ಆಟಗಾರರನ್ನು ಆಯ್ಕೆ ಮಾಡಿ ಪರೀಕ್ಷೆಗೆ ಒಳಪಡಿಸಲಿದ್ದೇವೆ. ಅಲ್ಲದೆ ಟೆಸ್ಟ್​ ಹಾಗೂ ಏಕದಿನ ಕ್ರಿಕೆಟ್​ಗೂ ಯುವ ಆಟಗಾರರನ್ನು ಆಯ್ಕೆ ಮಾಡಿದ್ದು ಇದೇ ವಿಚಾರಕ್ಕೆ’ ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top