fbpx
ಸಮಾಚಾರ

ಕೊಹ್ಲಿ–ರೋಹಿತ್ ಶೀತಲ ಸಮರದ ಬಗ್ಗೆ ಕೊನೆಗೂ ಮೌನ ಮುರಿದ ಬಿಸಿಸಿಐ: ಹೇಳಿದ್ದೇನು ಗೊತ್ತಾ?

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಮಾತು ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಗೆ ಕೊಹ್ಲಿ ವಿಶ್ರಾಂತಿ ತೆಗೆದುಕೊಳ್ಳಲು ಬಯಸಿದ್ದರು ಕೂಡ ತಮ್ಮ ಅನುಪಸ್ಥಿತಿಯಲ್ಲಿ ರೋಹಿತ್‍ಗೆ ನಾಯಕತ್ವದ ನೀಡುವುದರಿಂದ ಕೊಹ್ಲಿ ಟೂರ್ನಿಗೆ ಬಂದಿದಾರೆ ಎಂದು ಮಾಧ್ಯಮವೊಂದು ವರದಿ ಮಾಡಿತ್ತು. ಆದರೆ ಈ ವರದಿಯನ್ನು ಬಿಸಿಸಿಐ ಸಾರಾಸಗಟಾಗಿ ತಳ್ಳಿ ಹಾಕಿದೆ,.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಭಿನ್ನಭಿಪ್ರಾಯ ಉಲ್ಬಣಿಸಿದೆ ಎಂಬ ವದಂತಿಗಳನ್ನು ಸುಪ್ರೀಂ ಕೋರ್ಟ್ ನೇಮಿತ ಬಿಸಿಸಿಐ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಿರುವ ಆಡಳಿತಾತ್ಮಕ ಸಮಿತಿ (ಸಿಒಎ) ಮುಖ್ಯಸ್ಥ ವಿನೋದ್ ರಾಯ್ ತಳ್ಳಿ ಹಾಕಿದ್ದಾರೆ. ಮಾಧ್ಯಮ ವರದಿಗಳಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ರಾಯ್, ಇವೆಲ್ಲ ಕಟ್ಟುಕಥೆಗಳನ್ನು ನೀವು ಸೃಷ್ಟಿ ಮಾಡಿದ್ದೀರಿ ಎಂದು ಉತ್ತರಿಸಿದ್ದಾರೆ.

ಪತ್ರಿಕಾಗೋಷ್ಠಿ ದಿಢೀರ್ ರದ್ದು:
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಮನಸ್ತಾಪ ಜೋರಾಗಿದೆ ಎನ್ನುವ ಸುದ್ದಿಯ ಬೆನ್ನಲ್ಲೇ, ವಿಂಡೀಸ್ ಟೂರ್ನಿಗೆ ಮುನ್ನಾ ನಡೆಯಬೇಕಿದ್ದ ಪ್ರತಿಕಾಗೋಷ್ಠಿಯನ್ನು ದಿಢೀರ್ ರದ್ದು ಪಡಿಸಲಾಗಿದೆ. ವೆಸ್ಟ್‌ ಇಂಡೀಸ್‌ ಪ್ರವಾಸ ತೆರಳುವ ಮುನ್ನ ಟೀಮ್‌ ಇಂಡಿಯಾ ಯಾವುದೇ ಸುದ್ದಿಗೋಷ್ಠಿ ಹಮ್ಮಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳು ಭಾನುವಾರ ಧೃಡಪಡಿಸಿವೆ.

ಯಾವುದೇ ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಟೀಂ ಇಂಡಿಯಾ ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸುತ್ತಿದ್ದರು. ಟೀಂ ಇಂಡಿಯಾ ಸೋಮವಾರ ರಾತ್ರಿ ವೆಸ್ಟ್ ಇಂಡೀಸ್‍ಗೆ ಪ್ರಯಾಣ ಬೆಳೆಸಲಿದ್ದು, ರೋಹಿತ್ ರೊಂದಿಗೆ ಮನಸ್ತಾಪ ಹೊಂದಿರುವ ಪ್ರಶ್ನೆಗಳನ್ನು ಕೇಳಬಹುದು. ಸುದ್ದಿಗೋಷ್ಠಿಯಲ್ಲಿ ಎದುರಾಗಬಹುದಾಗಿದ್ದ ಪ್ರಶ್ನೆಗಳಿಂದ ಹೊಸ ವಿವಾದ ಸೃಷ್ಟಿ ಆಗದಂತೆ ನೋಡಿಕೊಳ್ಳಲು ಕೊಹ್ಲಿ ಮಾಧ್ಯಮಗೋಷ್ಠಿಗೆ ಭಾಗವಹಿಸದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top