fbpx
ಸಮಾಚಾರ

ಅಗಲಿದ ಆತ್ಮೀಯ ಗೆಳೆಯನ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಸಿದ್ದರಾಮಯ್ಯ, ರಮೇಶ್ ಕುಮಾರ್

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿಯವರ ಅಂತ್ಯಕ್ರಿಯೆಯು ಶಾಂತರೀತಿಯಲ್ಲಿ ಮುಗಿದಿದೆ. ಇಂದು ಸೋಮವಾರ ಹೈದರಾಬಾದ್​ನ ನೆಕ್ಲೇಸ್​​​ ರಸ್ತೆ ಸಮೀಪದ ಸರ್ಕಾರಿ ಜಾಗವೊಂದರಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಸುದಿನಿ ಜೈಪಾಲ್​​ ರೆಡ್ಡಿಯವರ ಈ ಅಂತ್ಯಕ್ರಿಯೆಯಲ್ಲಿ ಕಾಂಗ್ರೆಸ್​​ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ್​​ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸ್ಪೀಕರ್​​​​ ರಮೇಶ್​​ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.. ವಿಶೇಷವಾಗಿ ಸಿದ್ಧರಾಮಯ್ಯ ಹಾಗೂ ರಮೇಶ್ ಕುಮಾರ್ ಅವರು ಜೈಪಾಲ್ ರೆಡ್ಡಿ ಪಾರ್ಥಿವ ಶರೀರಕ್ಕೆ ಹೆಗಲು ನೀಡುವ ಮೂಲಕ ತಮ್ಮ ಆಪ್ತ ಮಿತ್ರನಿಗೆ ಅಂತಿಮ ನಮನ ಸಲ್ಲಿಸಿದರು.

ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿಶ್ವಾಸ ಮತ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದ ನಂತರ ಕೆ.ಆರ್.ರಮೇಶ್‌ಕುಮಾರ್ ಹಾಗೂ ಸಿದ್ದರಾಮಯ್ಯ ಹೈದರಾಬಾದ್‌ ತಲುಪಿ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು.

ಇತ್ತೀಚೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜೈಪಾಲ್ ರೆಡ್ಡಿಯವರ ನಿಧನಕ್ಕೆ ಇಡೀ ದೇಶವೇ ಸಂತಾಪ ಸೂಚಿಸಿದೆ. ಇವರ ಪಾರ್ಥಿವ ಶರೀರವನ್ನು ಜುಬ್ಲಿ ಹಿಲ್ಸ್‌ನಲ್ಲಿರುವ ತಮ್ಮದೇ ನಿವಾಸದಲ್ಲಿ ಸಾರ್ವಜನಿಕರ ಪ್ರದರ್ಶನಕ್ಕೆ ಇರಿಸಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top