fbpx
ಸಮಾಚಾರ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಭಿಮಾನಿಗೆ ಕಿಚ್ಚನ ಸಂತಾಪ: ಅಭಿಮಾನಿ ಕುಟುಂಬಕ್ಕೆ ಆರ್ಥಿಕ ನೆರವು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಅಪ್ಪಟ ಅಭಿಮಾನಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಪುನೀತ್ ಆರ್ಯ ಎಂಬವರು ಸಾವನ್ನಪ್ಪಿದ್ದು, ಅಭಿಮಾನಿಯ ಸಾವಿಗೆ ಕಿಚ್ಚ ಸುದೀಪ್ ಕಂಬನಿ ಮಿಡಿದಿದ್ದಾರೆ.

 

 

“ಪುನೀತ್ ಆರ್ಯ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಈ ಅದ್ಭುತ ಆತ್ಮ ಇನ್ನಿಲ್ಲ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಲವು ವರ್ಷಗಳಿಂದ ಪುನೀತ್ ನನ್ನ ಅಭಿಮಾನಿ ಹಾಗೂ ಸಹೋದರರಾಗಿದ್ದರು. ಬಹಳ ಬೇಸರವಾಗುತ್ತಿದೆ. ನಾನು ಪುನೀತ್‍ರನ್ನು ಮಿಸ್ ಮಾಡಿಕೊಳ್ಳುತ್ತೇನೆ” ಎಂದು ಕಿಚ್ಚ ಸುದೀಪ್ ಟ್ವಿಟರ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಅಷ್ಟೇ ಅಲ್ಲದೆ ಮೃತ ಅಭಿಮಾನಿಯ ಕುಟುಂಬಕ್ಕೆ 2,50,000/- ರೂ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ,,

ಏನಿದು ಘಟನೆ:
ಬೈಕ್ ರೈಡ್ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ತೀವ್ರಗೆ ಸ್ಥಳದಲ್ಲೇ ಪುನೀತ್ ಕೊನೆಯುಸಿರೆಳೆದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಪಘಾತವಾದಾಗ ತಡರಾತ್ರಿಯಾಗಿದ್ದರಿಂದ ಇಬ್ಬರು ಸ್ನೇಹಿತರು ಫೋನ್ ರಿಸೀವ್ ಮಾಡಿಲ್ಲ. ಕೊನೆಗೆ ಅಪಘಾತದಲ್ಲಿ ತೀವ್ರ ರಕ್ತ ಸ್ರಾವದಿಂದ ನಿತ್ರಾಣಗೊಂಡು ಸ್ಥಳದಲ್ಲೇ ಪುನೀತ್ ಮೃತಪಟ್ಟಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top