fbpx
ಸಮಾಚಾರ

ಚೊಚ್ಚಲ ಮಗುವಿಗೆ ಜನ್ಮ ನೀಡಿದ ಕುಲವಧು ನಟಿ ವಚನಾ.

ಕಿರುತೆರೆ ನಟಿ ದಿಶಾ ಮದನ್ ತಮ್ಮ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದು, ತಾಯಿಯಾದ ಖುಷಿಯಲ್ಲಿ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ. ನಟಿ ದಿಶಾ ಅವರು ಶನಿವಾರ ಅಂದರೆ ಜುಲೈ 27 ರಂದು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೋಮವಾರ ತಮ್ಮ ಮಗುವಿನ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಗುವಿಗೆ ವಿಹಾನ್ ಶಶಾಂಕ್ ವಾಸುಕಿ ಎಂದು ಹೆಸರಿಟ್ಟಿದ್ದಾರೆ. ಆಗಲೇ ಮಗುವಿಗೆ Bubba V ಎಂಬ ಹೆಸರಿನಲ್ಲಿ ಇನ್ಸ್ಟಾಗ್ರಾಮ್ ಖಾತೆಯನ್ನು ತೆರೆದಿದ್ದಾರೆ. ಸ್ನೇಹಿತರು ಮತ್ತು ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಅವರು ಶುಭಾಶಯವನ್ನು ತಿಳಿಸುತ್ತಿದ್ದಾರೆ.

View this post on Instagram

Bubba V 🙂 💙 @shashankvasuki

A post shared by Disha Madan (@disha.madan) on

 

ಅಂದಹಾಗೆ ದಿಶಾ ಮದನ್ ‘ಕುಲವಧು’ ಧಾರಾವಾಹಿ ನಂತರ ಡ್ಯಾನ್ಸಿಂಗ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದರು ಆನಂತರ ಆನ್‌ಲೈನ್‌ ಪ್ರಪಂಚದಲ್ಲಿ ಟಿಕ್ ಟಾಕ್, ಮೂಸಿಕಲಿ ಹಾಗೂ ಯೂಟ್ಯೂಬ್ ವಿಡಿಯೋ ಮಾಡುವ ಮೂಲಕ ಜನರಿಗೆ ಹತ್ತಿರವಾದರು. ಅಷ್ಟೇ ಅಲ್ಲದೆ ಶಿವರಾಜ್ ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ವೆಬ್ ಸೀರಿಸ್ ನಲ್ಲಿ ಅಭಿನಯಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top