fbpx
ಸಮಾಚಾರ

ಮೋದಿ ಡಿಸ್ಕವರಿ ಚಾನೆಲ್ ಕಾರ್ಯಕ್ರಮ ಪುಲ್ವಾಮ ದಾಳಿ ವೇಳೆ ಶೂಟಿಂಗ್‌ ಮಾಡಿದ್ದೇ?

ಹೊಸ ಕಾರ್ಯಕ್ರಮ, ಯೋಜನೆಗಳಲ್ಲಿ ಸದಾ ಒಂದು ಹೆಜ್ಜೆ ಮುಂದಿಡುವ ಪ್ರಧಾನಿ ಮೋದಿ, ಇದೀಗ ಅಡ್ವೆಂಚರಸ್‌ ಕಾರ್ಯಕ್ರಮವೊಂದರಲ್ಲಿ ಸುದ್ದಿಯಾಗಿದ್ದಾರೆ. ಪ್ರತಿಷ್ಠಿತ ಡಿಸ್ಕವರಿ ವಾಹಿನಿಯ ಮ್ಯಾನ್‌ ವರ್ಸಸ್‌ ವೈಲ್ಡ್‌ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಳ್ಳಲಿದ್ದಾರೆ. ಜಾಗತಿಕಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆದಿರುವ ಮ್ಯಾನ್‌ ವರ್ಸಸ್‌ ವೈಲ್ಡ್‌ ಕಾರ್ಯಕ್ರಮದಲ್ಲಿ ಈವರೆಗೂ ಕಂಡಿರದ ಮೋದಿ ಕಾಣಸಿಗಲಿದ್ದಾರೆ.

ಪುಲ್ವಾಮ ದಾಳಿ ವೇಳೆ ಪ್ರಧಾನಿ ನರೇಂದ್ರ ಮೋದಿ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಶೂಟಿಂಗ್‌ ನಿರತರಾಗಿದ್ದರು ಎಂದು ಕಾಂಗ್ರೆಸ್ ಆರೋಪಿಸಿತ್ತು. ಇದೀಗ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದ ಪ್ರೊಮೊ ಸುದ್ದಿಯಾಗುತ್ತಿದ್ದಂತೆ ಈ ಆರೋಪ ಮತ್ತೆ ಸದ್ದು ಮಾಡುತ್ತಿದೆ ಎಂದು ಸ್ಕ್ರಾಲ್ ಇನ್ ವರದಿ ಮಾಡಿದೆ.

ಫೆಬ್ರುವರಿ 14ರಂದು ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ಸಿಆರ್‌ಪಿಎಫ್‍ನ 40 ಮಂದಿ ಯೋಧರು ಹುತಾತ್ಮರಾಗಿದ್ದರು. ದಾಳಿ ನಡೆದು ದೇಶಕ್ಕೆ ದೇಶವೇ ಶೋಕ ಸಾಗರದಲ್ಲಿ ಮುಳುಗಿರುವಾಗ ಪ್ರಧಾನಿ ನರೇಂದ್ರ ಮೋದಿ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಾಕ್ಷ್ಯಚಿತ್ರ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದರು ಎಂದು ಕಾಂಗ್ರೆಸ್ ಆರೋಪಿಸಿತ್ತು.

ಪುಲ್ವಾಮ ದಾಳಿ ನಡೆದು ಒಂದು ವಾರದ ನಂತರ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನೇತಾರ ರಣದೀಪ್ ಸುರ್ಜೆವಾಲ, ಯೋಧರನ್ನು ಕಳೆದುಕೊಂಡ ದುಃಖದಲ್ಲಿ ಇಡೀ ದೇಶವೇ ಶೋಕ ಸಾಗರದಲ್ಲಿ ಮುಳುಗಿರುವಾಗ ಪ್ರಧಾನಿ ಮೋದಿ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಶೂಟಿಂಗ್ ಮಾಡುತ್ತಾ, ಬೋಟ್‌ ರೈಡ್ ನಡೆಸಿ ಮೊಸಳೆಗಳನ್ನು ವೀಕ್ಷಣೆ ಮಾಡುತ್ತಿದ್ದರು ಎಂದು ಆರೋಪಿಸಿದ್ದರು.

 

 

ಈ ಕಾರ್ಯಕ್ರಮದ ಪ್ರೋಮೋ ಈಗಾಗಲೇ Man Vs Wild ಕಾರ್ಕ್ರಮದ ನಿರೂಪಕ ಬೆಯರ್ ಗ್ರಿಲ್ಸ್ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆಗಸ್ಟ್ 12ರಂದು ರಾತ್ರಿ 9 ಗಂಟೆ ಸುಮಾರಿಗೆ ಈ ಕಾರ್ಯಕ್ರಮ ಬಿತ್ತರವಾಗಲಿದ್ದು ಅಂದು ಜಗತ್ತಿನ 180 ರಾಷ್ಟ್ರಗಳಿಗೆ ಮೋದಿ ಅವರ ಇನ್ನೊಂದು ಮುಖ ಗೊತ್ತಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

 

 

ಪ್ರೊಮೋದಲ್ಲಿ ಇರುವುದೇನು?
ಗ್ರಿಲ್ಸ್‌ನ್ನು ಭಾರತಕ್ಕೆ ಸ್ವಾಗತಿಸುತ್ತಿದ್ದು, ಗ್ರಿಲ್‌ ಜತೆಗೆ ಕಾಡುದಾರಿಯಲ್ಲಿ ಸಾಗಿದ್ದಾರೆ. ಅಷ್ಟೇ ಅಲ್ಲದೆ, ನದಿಯಲ್ಲಿ ತೆಪ್ಪದಲ್ಲಿ ಕುಳಿತು ಅರಣ್ಯ ಸಂಪತ್ತಿನ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ. ನೀವು ಭಾರತದ ಅತ್ಯಂತ ಪ್ರಮುಖ ವ್ಯಕ್ತಿ, ನಿಮ್ಮನ್ನು ಜೀವಂತವಾಗಿರಿಸುವುದು ನನ್ನ ಆದ್ಯ ಕರ್ತವ್ಯ ಎಂದು ಗ್ರಿಲ್ಸ್‌ ವೀಡಿಯೋದಲ್ಲಿ ಹೇಳಿಕೆ ನೀಡಿ, ಮೋದಿಗೆ ವಿಶೇಷ ವಸ್ತ್ರಗಳನ್ನು ಧರಿಸಲು ನೀಡುವುದನ್ನೂ ಕಾಣಬಹುದು!

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top