fbpx
ಸಮಾಚಾರ

ಎಸ್‍ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ನಾಪತ್ತೆ- 12 ಗಂಟೆ ಶೋಧ ನಡೆಸಿದರೂ ಸಿಕ್ಕಿಲ್ಲ ಸುಳಿವು.

ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ. ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಸಿದ್ದಾರ್ಥ್ ಸೋಮವಾರ ತನ್ನ ಇನ್ನೋವಾ ಕಾರಿನಲ್ಲಿ ಬಿಸಿನೆಸ್ ಸಂಬಂದಿತ ಪ್ರವಾಸಕ್ಕಾಗಿ ಚಿಕ್ಕಮಗಳೂರಿಗೆ ಹೋಗಿದ್ದರು. ಅಲ್ಲಿಂದ ಅವರು ಕೇರಳಕ್ಕೆ ಪ್ರಯಾಣಿಸಬೇಕಿತ್ತು. ಆದರೆ, ಸಿದ್ದಾರ್ಥ್‌ ನೇತ್ರಾವತಿ ಸೇತುವೆ ಮೇಲೆ ತೆರಳುತ್ತಿದ್ದಾಗ ಕಡೆಕಾರು ರಸ್ತೆಯಲ್ಲಿ ಹೋಗುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರು ನಿಲ್ಲಿಸಲು ಹೇಳಿ, ಮೊಬೈಲ್ ನಲ್ಲಿ ಮಾತನಾಡುತ್ತಾ ಕಾರಿನಿಂದ ಇಳಿದು ಮುಂದಕ್ಕೆ ಹೋಗಿದ್ದಾರೆ. ಆ ಬಳಿಕ ನಾಪತ್ತೆ ಆಗಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಅರ್ಧ ಗಂಟೆಯಾದರೂ ಸಿದ್ಧಾರ್ಥ್ ಅವರು ವಾಪಸ್ ಬರದೇ ಇದ್ದುದನ್ನು ಕಂಡು ಗಾಬರಿಯಾದ ಚಾಲಕ ಅವರಿಗೆ ಫೋನ್ ಮಾಡಿದ್ದಾನೆ. ಈ ವೇಳೆ ಅವರ ಫೋನ್ ಸ್ವಿಚ್ಡ್ ಆಫ್ ಆಗಿದ್ದು ಗಮನಕ್ಕೆ ಬಂದಿದೆ. ಕಾರು ಚಾಲಕ ತಕ್ಷಣ ಈ ವಿಚಾರವನ್ನು ಸಿದ್ಧಾರ್ಥ್ ಮನೆಯವರಿಗೆ ತಿಳಿಸಿದ್ದಾರೆ.

ಸಿದ್ಧಾರ್ಥ್​ ನಾಪತ್ತೆಯಾದ ಬೆನ್ನಲ್ಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ 15 ದಿನಗಳಿಂದ ಅವರು ಯಾರ್ಯಾರಿಗೆ ದೂರವಾಣಿ ಕರೆ ಮಾಡಿದ್ದಾರೆ ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಅವರ ಪತ್ತೆಗೆ ಮೂರು ವಿಶೇಷ ತಂಡ ನೇಮಕ ಮಾಡಲಾಗಿದೆ. 14 ಗಂಟೆಗಳ ಕಾಲ ಸಿದ್ಧಾರ್ಥ್​ಗಾಗಿ ಹುಡುಕಾಟ ನಡೆಸಿದ್ದರೂ ಎಲ್ಲಿ ಹೋದರು ಎಂಬುದರ ಬಗ್ಗೆ ಒಂದೇ ಒಂದು ಸುಳಿವು ಕೂಡ ಸಿಕ್ಕಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top