fbpx
ಸಮಾಚಾರ

‘ನಾವು ಆಚರಣೆ ಮಾಡೇ ಮಾಡ್ತೇವೆ, ಇನ್ನೂ ಅದ್ದೊರಿಯಾಗಿ ಆಚರಿಸುತ್ತೇವೆ, ಯಾರಿಂದಲೂ ತಡೆಯೋಕಾಗಲ್ಲ’ ಜಮೀರ್ ಬಹಿರಂಗ ಸವಾಲು.

ಮೈಸೂರು ಹುಲಿ ಎಂದೇ ಕರೆಯಲಾಗುವ ಟಿಪ್ಪು ಸುಲ್ತಾನ್​​ ಜಯಂತಿ ಆಚರಣೆಯನ್ನು ರದ್ದುಗೊಳಿಸಿ ನೂತನ ಸಿಎಂ ಬಿ.ಎಸ್​​ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಜಾರಿಗೊಳಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ಅಧಿಕಾರಕ್ಕೇರಿದ ಕೂಡಲೇ ರದ್ದುಗೊಳಿಸಿದೆ. ಈ ಬೆನ್ನಲ್ಲೇ ಸಿಎಂ ಅವರ ಈ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಜಮೀರ್ ಅಹಮದ್, ಕಳೆದ ಬಾರಿಗಿಂತ ಈ ಬಾರಿ ಟಿಪ್ಪು ಜಯಂತಿಯನ್ನು ಬಹಳ ಅದ್ಧೂರಿಯಿಂದ ಆಚರಣೆ ಮಾಡುತ್ತೇವೆ. ಜಯಂತಿಯನ್ನು ಆವತ್ತಿನಿಂದಲೇ ಆಚರಿಸಿಕೊಂಡು ಬರುತ್ತಿದ್ದೇವೆ. ಹೀಗಾಗಿ ಈ ಬಾರಿಯೂ ಜಯಂತಿಯನ್ನು ಬಹಳ ಸಂಭ್ರಮದಿಂದ ಆಚರಿಸುತ್ತೇವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಟಿಪ್ಪು ಜಯಂತಿಯನ್ನು ಬಿಜೆಪಿ ರದ್ದು ಮಾಡುತ್ತದೆ ಎಂದು ಗೊತ್ತಿತ್ತು. ಆದರೆ ಇಷ್ಟು ಬೇಗ ಮಾಡಲಿದೆ ಎಂದು ಗೊತ್ತಿರಲಿಲ್ಲ. ರದ್ದು ಪಡಿಸಬೇಕಾದರೆ ಕ್ಯಾಬಿನೆಟ್ ನಲ್ಲಿ ನಿರ್ಧಾರ ಆಗಬೇಕು. ಹೇಗೆ ರದ್ದು ಪಡಿಸಿದರೋ ಗೊತ್ತಿಲ್ಲ.. ಎಲ್ಲಾ ಧರ್ಮದವರು ಟಿಪ್ಪು ಜಯಂತಿ ಆಚರಿಸಿಕೊಂಡು ಬಂದಿದ್ದಾರೆ. ಎಲ್ಲಾ ಕಡೆ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಇನ್ನೂ ಮುಂದೆ ಮತ್ತಷ್ಟು ಜೋರಾಗಿ ಆಚರಿಸುತ್ತೇವೆ” ಎಂದು ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top