fbpx
ಸಮಾಚಾರ

ನೇರವಾಗಿ ಆರ್. ಅಶೋಕಗೆ ಪತ್ರ ಬರೆದ ಅಮಿತ್ ಶಾ! ಆ ಪತ್ರದಲ್ಲೇನಿದೆ ಗೊತ್ತಾ?

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ನೇರವಾಗಿ ಹಾಗೂ ಪರೋಕ್ಷವಾಗಿ ಕಾರಣವಾಗಿರೋದಕ್ಕೆ ಬಿಜೆಪಿ ಕಡೆಯಿಂದ ಅಭಿನಂದನ ಪತ್ರ ಬರೆಯಲಾಗಿದೆ.

 

 

ಕರ್ನಾಟಕದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬೆನ್ನಲ್ಲೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನೆ, ಕಾರ್ಯ ವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಅಶೋಕ ಅವರಿಗೆ ತಿಳಿಸಿದ್ದಾರೆ.

ಇನ್ನು ಈ ಪತ್ರಕ್ಕೆ ಸಂಭ್ರಮ ವ್ಯಕ್ತಪಡಿಸಿರುವ ಆರ್.ಅಶೋಕ್​ ಅಮಿತ್ ಶಾ ಹೇಳಿರುವ ಅಭಿನಂದನೆ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಅಂತಾ ಅಶೋಕ್ ಪ್ರತಿಕ್ರಿಯೆ ನೀಡಿದ್ದು ಈ ವಿಷಯವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಅಂದಹಾಗೆ ಕರ್ನಾಟಕದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡುವ ಮೂಲಕ 26 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವ್ರ ಎಲ್ಲ ರ್ಯಾಲಿಯಗಳ ಜವಾಬ್ದಾರಿಯನ್ನು ಆರ್ ಅಶೋಕ್ ವಹಿಸಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top