fbpx
ಸಮಾಚಾರ

ಕೆ.ಆರ್.ಪೇಟೆ ಉಪಚುನಾವಣೆ: ನಿಖಿಲ್ ವಿರುದ್ಧ ಸ್ಪರ್ಧೆ ಬಗ್ಗೆ ಅಭಿಷೇಕ್ ಹೇಳಿದ್ದೇನು?

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ವಿರುದ್ಧ ಸೋತಿದ್ದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಕೆ.ಆರ್‌.ಪೇಟೆ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವರೇ? ಹೀಗೊಂದು ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 17 ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ಈ ಬಾರಿ ಮಂಡ್ಯದ ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಮತ್ತೆ ನಿಖಿಲ್ ಕುಮಾರಸ್ವಾಮಿಯನ್ನು ಅದೃಷ್ಟ ಪರೀಕ್ಷೆಗೆ ಒಡ್ಡಲು ಜೆಡಿಎಸ್​ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

“ಈ ನಡುವೆ ಕೆ.ಆರ್.ಪೇಟೆಯಲ್ಲಿ ನಿಖಿಲ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಅಭಿಷೇಕ್ ಸ್ಪರ್ಧೆ ಮಾಡಬೇಕು. ಮಂಡ್ಯದ ಜನರು ಸ್ವಾಭಿಮಾನಿಗಳು ಎಂದು ಮತ್ತೆ ಸಾಬೀತು ಮಾಡೋಣ. ಇದಕ್ಕೆ ನಿಮ್ಮ ಅಭಿಪ್ರಾಯ ತಿಳಿಸಿ” ಎಂಬ ಸಂದೇಶವನ್ನು ಅಭಿಷೇಕ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಆದರೆ ರೋಚಕ ಹಣಾಹಣಿ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಅಭಿಷೇಕ್ ನಿರಾಸೆ ಮೂಡಿಸಿದ್ದಾರೆ.

ಈ ಸಂಬಂಧ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅಭಿಷೇಕ್ ಅವರು ,”ಅಭಿಮಾನಿಗಳ ಪ್ರೀತಿಗೆ ನಾನು ಚಿರಋಣಿ. ಆದರೆ ನಮ್ಮ ತಾಯಿ ರಾಜಕಾರಣದಲ್ಲಿ ಇರುವವರೆಗೂ ನಾನು ರಾಜಕೀಯ ಪ್ರವೇಶ ಮಾಡಲ್ಲ. ಕೆ.ಆರ್.ಪೇಟೆ ಉಪ ಚುನಾವಣೆಗೆ ಸ್ಪರ್ಧೆಯ ಬಗ್ಗೆ ಯೋಚಿಸಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಮೂಲಕ ಕೆ.ಆರ್.ಪೇಟೆ ಅಖಾಡದಲ್ಲಿ ನಿಖಿಲ್ ವರ್ಸಸ್ ಅಭಿಷೇಕ್ ರೋಷಕ ಫೈಟ್‍ ಆರಂಭವಾಗುವ ಮೊದಲೇ ಅಭಿಷೇಕ್ ಬ್ರೇಕ್ ಹಾಕಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top