fbpx
ಸಮಾಚಾರ

ಬೆಂಗಳೂರು ಕೇಂದ್ರ ಭಾಗದಲ್ಲಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆ ಆಗರ!

ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಪ್ರಾಥಮಿಕ ಶಾಲೆ ಅವ್ಯವಸ್ಥೆ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ..

ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ. ಹೆಣ್ಣು ಮಕ್ಕಳು ಶೌಚಲಯವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಈ ಶಾಲೆಯ ಆವರಣದಲ್ಲಿರುವ ಶಿಥಿಲಗೊಂಡ ಕಟ್ಟಡ ತೆರವುಗೊಳಿಸದೆ ಇರುವ ಪರಿಣಾಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಭಯಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

 

 

ಬೆಂಗಳೂರು ಕೇಂದ್ರ ನಗರದಲ್ಲಿರುವ ಸರ್ಕಾರಿ ಶಾಲೆಗಳ ಸ್ಥಿತಿಯೇ ಹೀಗಿದ್ದರೆ, ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಇರುವ ಶಾಲೆಗಳ ಸ್ಥಿತಿ ಹೇಗಿರಬಹುದು ಎಂಬುದು ಜನರ ಪ್ರಶ್ನಿಸುತ್ತಿದ್ದಾರೆ. ಸದ್ಯ ಶಿವಾಜಿನಗರ ಸರ್ಕಾರಿ ಪ್ರಾಥಮಿಕ ಶಾಲೆಗೆ ಶೌಚಾಲಯ, ಎತ್ತರದ ಸುರಕ್ಷಿತ ಕಂಪೌಂಡ್‌, ಕುಡಿವ ನೀರಿನ ವ್ಯವಸ್ಥೆ ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣಕ್ಕಾಗಿ ಕ್ರಮ ಕೈಗೊಳ್ಳುವುದು ಅಗತ್ಯವಿದೆ.

ಖಾಸಗಿ ಶಾಲೆಗಳಿಗೆ ಎಲ್ಲ ರೀತಿಯ ಪ್ರೋತ್ಸಾಹ ನೀಡುವ ಸರ್ಕಾರ, ಸರ್ಕಾರಿ ಶಾಲೆಗಳ ಬಗ್ಗೆಯೇ ಯಾಕೆ ನಿರ್ಲಕ್ಷ್ಯ ವಹಿಸುತ್ತಿದೆ ಎಂಬುದು ಸಾರ್ವಜನಿಕರ ಆಕ್ರೋಶವಾಗಿದೆ. ಇನ್ನಾದರೂ ಇಂತಹ ನಿರ್ಲಕ್ಷ್ಯ ಶಾಲೆಗಳತ್ತ ಸರ್ಕಾರ ಗಮನಹರಿಸಲಿ ಎಂದು ಗ್ರಾಮಸ್ಥರುಒತ್ತಾಯಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top