fbpx
ಸಮಾಚಾರ

“ಮುಖ್ಯಮಂತ್ರಿಯಾಗಿ 14 ತಿಂಗಳು ನಾನು ಕಾಂಗ್ರೆಸ್‌ನ ಗುಲಾಮನಂತೆ ಇದ್ದೇ ” ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ!

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ನಾನು ಕಾಂಗ್ರೆಸ್‌ನ ಗುಲಾಮನಂತೆ ದುಡಿದಿದ್ದೇನೆ ಎಂದು ಜೆಡಿ (ಎಸ್) ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ನಿಗಮ ಮತ್ತು ಮಂಡಳಿಗಳಿಗೆ ನೇಮಕವಾಗಿದ್ದ ಶಾಸಕರು ಸೇರಿ ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆ. ಆದರೂ, ಸರ್ಕಾರ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಲವು ಕಾಂಗ್ರೆಸ್ ನಾಯಕರು ಮೈತ್ರಿ ಸರ್ಕಾರ ರಚಿಸುವ ಒಲವು ಹೊಂದಿರಲಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಯಾವುದೇ ಪಕ್ಷಕ್ಕೆ ಸಿಗದ ಕಾರಣ ಅಂದಿನ ಪರಿಸ್ಥಿತಿಗೆ ಕಾಂಗ್ರೆಸ್ ಮುಕ್ತವಾಗಿ ತುಂಬುಮನಸ್ಸಿನಿಂದ ಜೆಡಿಎಸ್ ಜೊತೆ ಕೈಜೋಡಿಸಿ ಸರ್ಕಾರ ರಚನೆಗೆ ಮುಂದಾಯಿತು. ಆದರೆ ನನಗೆ ತಿಳಿದಿರುವ ಪ್ರಕಾರ ಕೆಲ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಈ ಮೈತ್ರಿ ಇಷ್ಟವಿರಲಿಲ್ಲ ಎಂದರು ಕುಮಾರಸ್ವಾಮಿ.

. ಕಳೆದ 14 ತಿಂಗಳುಗಳಿಂದ, ನಾನು ಈ ಶಾಸಕರಿಗೆ ಮತ್ತು ನಮ್ಮ ಸಮ್ಮಿಶ್ರ ಪಾಲುದಾರ (ಕಾಂಗ್ರೆಸ್) ಗೆ ಗುಲಾಮರಂತೆ ಕೆಲಸ ಮಾಡಿದ್ದೇನೆ. ಆದರೂ ಅವರು ಏಕೆ ನನ್ನನ್ನು ದೂಷಿಸುತ್ತಿದ್ದಾರೆ? ನನಗೆ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್​ ಶಾಸಕರ ಕ್ಷೇತ್ರಗಳಿಗೆ 14 ತಿಂಗಳಲ್ಲಿ 19 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಜೆಡಿಎಸ್​ ಶಾಸಕರ ಕ್ಷೇತ್ರಗಳಿಗೆ ಹೋಲಿಸಿದರೆ, ಕಾಂಗ್ರೆಸ್​ ಶಾಸಕರ ಕ್ಷೇತ್ರಗಳಿಗೇ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದೆ. ಕಳೆದ 14 ತಿಂಗಳುಗಳಿಂದ, ನಾನು ಈ ಶಾಸಕರಿಗೆ ಮತ್ತು ನಮ್ಮ ಸಮ್ಮಿಶ್ರ ಪಾಲುದಾರ (ಕಾಂಗ್ರೆಸ್) ಗೆ ಗುಲಾಮರಂತೆ ಕೆಲಸ ಮಾಡಿದ್ದೇನೆ. ಆದರೂ ಅವರು ಏಕೆ ನನ್ನನ್ನು ದೂಷಿಸುತ್ತಿದ್ದಾರೆ? ನನಗೆ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top