fbpx
ಸಮಾಚಾರ

ಬಿಜೆಪಿ ನಾಯಕಿ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ!

ಮಾಜಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​​​ ಅವರು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 67 ವರ್ಷದ ಬಿಜೆಪಿ ಸಂಸದೆ ಇಂದು ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ಧಾರೆ.

 

 

ಮಂಗಳವಾರ ರಾತ್ರಿ ಅವರಿಗೆ ತೀವ್ರ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ದಿಲ್ಲಿ ಏಮ್ಸ್‌ಗೆ ದಾಖಲಿಸಲಾಗಿತ್ತು. ತುರ್ತು ನಿಘಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತಾದರೂ, ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ. ಸುಷ್ಮಾ ಸ್ವರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಅನೇಕ ನಾಯಕರು ಏಮ್ಸ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಅಂದಹಾಗೆ ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 1977ರಲ್ಲಿ ಉತ್ತರ ಭಾರತದ ಹರಿಯಾಣ ರಾಜ್ಯದ ಸಂಪುಟ ಸಚಿವೆಯಾದರು. 2014ರ ಮೋದಿ ಸರಕಾರದಲ್ಲಿ ಅವರು ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top