fbpx
ಸಮಾಚಾರ

ಅನೈತಿಕ ಸಂಬಂಧದ ಆರೋಪ: ವಿಡಿಯೋ ಕಾಲ್ ಮಾಡಿ ನೇಣು ಹಾಕಿಕೊಂಡ ಬಾಹುಬಲಿ ನಟನ ಪತ್ನಿ! ನಟ ಅರೆಸ್ಟ್

ರಾಜಮೌಳಿ ಅವರ “ಬಾಹುಬಲಿ”ಯಲ್ಲಿ ಸಣ್ಣ ಪಾತ್ರವೊಂದರಲ್ಲಿ ನಟಿಸಿದ್ದ ಪ್ರಖ್ಯಾತ ತೆಲುಗು ಕಿರುತೆರೆ ಕಲಾವಿದ ಮಧು ಪ್ರಕಾಶ್ ಅವರ ಪತ್ನಿ ಭಾರತಿ ನೇಣಿಗೆ ಶರಣಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಧು-ಭಾರತಿ ದಾಂಪತ್ಯದಲ್ಲಿ ವಿರಸ ಮೂಡಿದ್ದು, ಇದರಿಂದ ಪತ್ನಿಯು ಮನನೊಂದು ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಸಂಜೆ 7.30ಕ್ಕೆ ಮಧು ಜಿಮ್ ಗೆ ಹೋಗಿ ವಾಪಸ್ ಮನೆಗೆ ಬಂದಾಗ ಪತ್ನಿ ಭಾರತಿ ತನ್ನ ಕೋಣೆಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ಹೈದರಬಾದ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವರದಕ್ಷಿಣೆಗಾಗಿ ಮಧು ಪತ್ನಿಗೆ ಕಿರುಕುಳ ನೀಡುತ್ತಿದ್ದ, ಅಷ್ಟೇ ಅಲ್ಲ ಆಕೆ ಮೇಲೆ ಹಲ್ಲೆ ನಡೆಸುತ್ತಿದ್ದ. ಇದರಿಂದಾಗಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಭಾರತಿ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ವಿಚಾರವಾಗಿ ಮಧು ಪತ್ನಿ ಎಂ.ಎಸ್ ಭಾರತಿ ಅವರ ತಂದೆ ನನ್ನ ಮಗಳಿಗೆ ನನ್ನ ಅಳಿಯ ಮತ್ತು ಆತನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಈ ವಿಚಾರಕ್ಕೆ ಅವಳಿಗೆ ಆಗಾಗ ಹಲ್ಲೆ ಮಾಡುತ್ತಿದ್ದರು. ಇದರಿಂದ ಮನನೊಂದ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಮಗಳ ಸಾವಿಗೆ ಮಧು ಪ್ರಕಾಶ್ ಕಾರಣ ಎಂದು ಭಾರತಿ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಭಾರತಿ ತಂದೆ ನೀಡಿದ ದೂರಿನ ಮೇರೆಗೆ ಮಧುವನ್ನು ಅರೆಸ್ಟ್ ಮಾಡಿರುವ ಪೊಲೀಸರು ವರದಕ್ಷಿಣೆ ಸಾವಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧುವನ್ನು ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವುದಾಗಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top