fbpx
ಸಮಾಚಾರ

ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಮುಂದಾದ ರಕ್ಷಿತ್ ಶೆಟ್ಟಿ: ಸಿಂಪಲ್ ಹುಡುಗನ ನಡೆಗೆ ವ್ಯಾಪಕ ಮೆಚ್ಚುಗೆ!

ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿರ್ಧರಿಸಿದ್ದಾರೆ. ಅನಾಥವಾಗಿ, ಆಶ್ರಯವಿಲ್ಲದೆ ಬೀದಿಗಳಲ್ಲಿ ಬದಕುವ ಮೂಕ ಪ್ರಾಣಿಗಳಿಗೆ ನೆರವು ನೀಡಲು ಮುಂದಾಗಿದ್ದಾರೆ. ಕೇರ್ ಎನ್ನುವ ಸಂಸ್ಥೆಯ ಜೊತೆಗೆ ನಟ ರಕ್ಷಿತ್ ಶೆಟ್ಟಿ ಈ ಕೆಲಸಕ್ಕೆ ಕೈ ಜೋಡಿಸಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಎಲ್ಲರ ಸಹಕಾರವನ್ನು ಕೇಳಿಕೊಂಡಿದ್ದಾರೆ.

ಕೇರ್ ಎಂಬ ಎನ್‍ಜಿಓದ ಜೊತೆ ರಕ್ಷಿತ್ ಕೈಜೊಡಿಸಿ ಬೀದಿ ನಾಯಿಗಳಿಗೆ ಆಶ್ರಯ ನೀಡುವ ಕೆಲಸಕ್ಕೆ ಸಾಥ್ ನೀಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಫೇಸ್‍ಬುಕ್‍ನಲ್ಲಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡು ಅಭಿಮಾನಿಗಳಿಗೆ ಹಾಗೂ ಎಲ್ಲರಿಗೂ ಅಭಿಯಾನಕ್ಕೆ ಕರೆ ನೀಡಿದ್ದಾರೆ.

ನಮ್ಮ ದೇಶದ ಪ್ರತಿಯೊಂದು ಬೀದಿಯಲ್ಲಿಯೂ ಹಲವಾರು ನಾಯಿಗಳನ್ನು ನೋಡುತ್ತೇವೆ. ಆದರೆ, ಮನೆಯಲ್ಲಿ ಸಾಕಲು ಮಾತ್ರ ಬ್ರೀಡ್ ನಾಯಿಗಳನ್ನು ಆಯ್ಕೆ ಮಾಡುತ್ತೇವೆ. ಬೀದಿ ನಾಯಿಗಳು ನಮ್ಮ ವಾತಾವರಣಕ್ಕೆ ಅವುಗಳು ಚೆನ್ನಾಗಿ ಹೊಂದಿಕೊಳ್ಳುತ್ತದೆ. ಅಲ್ಲದೆ ಅವುಗಳ ಸಾಕಲು ಖರ್ಚು ಕೂಡ ಕಡಿಮೆ. ಈ ನಾಯಿಗಳನ್ನು ದತ್ತು ಪಡೆಯಿರಿ ಆಗ ಅವುಗಳಿಗೂ ಮನೆ, ಕುಟುಂಬ, ಪ್ರೀತಿ, ವಾತ್ಸಲ್ಯ ಸಿಗುತ್ತದೆ. ಇದೇ ಸ್ವಾತಂತ್ರ್ಯ ದಿನವನ್ನು ಎಲ್ಲರು ಬೀದಿ ನಾಯಿಗಳನ್ನು ದತ್ತು ಪಡೆಯೋಣ, ಆಶ್ರಯ ನೀಡೋಣ ಎಂದು ವಿಡಿಯೋ ಮೂಲಕ ರಕ್ಷಿತ್ ಮನವಿ ಮಾಡಿಕೊಂಡಿದ್ದಾರೆ.

ಕೇರ್ ಸಂಸ್ಥೆ ನೇತೃತ್ವದಲ್ಲಿ ಇದೇ ಆಗಸ್ಟ್ 11 ರಂದು ‘ಇಂಡಿಪೆಂಡೆನ್ಸ್ ಅಡಾಪ್‍ಕ್ಷನ್ ಡ್ರೈವ್’ ಆರೋಜಿಸಲಾಗಿದೆ. ಬೆಳಗ್ಗೆ 12 ರಿಂದ 3 ಗಂಟೆವರೆಗೆ ಈ ಕಾರ್ಯಕ್ರಮ ನಡೆಯಲಿದೆ. ರಕ್ಷಿತ್ ಅವರ ಈ ಹೊಸ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top