fbpx
ಸಮಾಚಾರ

ಪ್ರವಾಹ ಪರಿಸ್ಥಿತಿಗೆ ಮಿಡಿದ ಸುಧಾ ಮೂರ್ತಿ: 10 ಕೋಟಿ ದೇಣಿಗೆ ನೀಡಿ ಹೃದಯ ವೈಶಾಲ್ಯತೆ ಮೆರೆದ ಇನ್ಫೋಸಿಸ್ ಒಡತಿ.!

ವಿಪರೀತ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ಕಣ್ಣ ಎದುರೇ ಕುಸಿದು ಹೋದ ಉತ್ತರಕ ಕರ್ನಾಟಕ ಜನರ ಕಷ್ಟದ ಬಗ್ಗೆ ಎಂಥವರಿಗಾದರೂ ಕರುಣೆ ಹುಟ್ಟುತ್ತದೆ. ಇಡೀ ಕರ್ನಾಟಕದ ಎಲ್ಲ ಕಡೆಗಳಿಂದಲೂ ಉತ್ತರಕ ಕರ್ನಾಟಕ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಕನ್ನಡ ಚಿತ್ರರಂಗ ಕೂಡ ಸ್ಪಂದಿಸಿದ್ದು ಅನೇಕ ಕಲಾವಿದರು ಆಹಾರ,ಹಣ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಒಂದೊಂದು ರೀತಿಯಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ.

ಇದಕ್ಕೆ ಸ್ಪಂಧಿಸಿರುವ ಸುಧಾ ಮೂರ್ತಿ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.

ಮುಂದುವರೆದ ಮಳೆ ಆರ್ಭಟ:
ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಪ್ರವಾಹಕ್ಕೆ ಇದುವರೆಗೆ 9 ಮಂದಿ ಮೃತಪಟ್ಟಿದ್ದು, 52 ಜಾನುವಾರು ಬಲಿಯಾಗಿವೆ. ರಾಜ್ಯದ 12 ಜಿಲ್ಲೆಗಳ 51 ತಾಲೂಕುಗಳಲ್ಲಿ ಪ್ರವಾಹ ಉಂಟಾಗಿದೆ. ಈ ಪ್ರದೇಶಗಳ 503 ಹಳ್ಳಿಗಳು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ 44,000 ಜನರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ.

ಸಂತ್ರಸ್ತರಿಗಾಗಿ 272 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 17,000 ಮಂದಿ ಆಶ್ರಯ ಪಡೆದಿದ್ದಾರೆ. ಹಳ್ಳ ಹಾಗೂ ನದಿ ಪಾತ್ರದ ಜಮೀನು ಸೇರಿದಂತೆ 1,48,293 ಹೆಕ್ಟೇರ್ ಜಮೀನುಗಳ ಬೆಳೆ ನಾಶವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top