fbpx
ಸಮಾಚಾರ

ತಕ್ಷಣ ಪರಿಹಾರಕ್ಕೆ ಯಡಿಯೂರಪ್ಪ ಕೇಳಿದ್ದು 6000 ಕೋಟಿ ಮೋದಿ ಕೊಟ್ಟಿದ್ದು 200 ಕೋಟಿ.

ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ತುರ್ತು ಕಾರ್ಯಾಚರಣೆ ನಡೆಸಲು ಅನುವಾಗುವಂತೆ ಕೇಂದ್ರ ಸರ್ಕಾರ 200 ಕೋಟಿ ಅನುದಾನ ಬಿಡುಗಡೆ ಮಾಡಿದೆ, ಸದ್ಯ ಮೊದಲ ಕಂತಿನಲ್ಲಿ 78 ಕೋಟಿ ಬಿಡುಗಡೆ ಮಾಡಲಾಗಿದ್ದು ಬಳಿಕ 128 ಕೋಟಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳಗಾವಿ ಸೇರಿಂದತೆ ರಾಜ್ಯದಲ್ಲಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ 10 ಸಾವಿರ ಕೋಟಿ ರೂ. ಹಾನಿಯಾಗಿದೆ. ತಕ್ಷಣವೇ ಮೂರು ಸಾವಿರ ಕೋಟಿ ರೂ. ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದರು..

ಪ್ರವಾಹ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ 100 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 12, 651 ಮನೆಗಳು ವಾಸಕ್ಕೆ ಯೋಗ್ಯವಿಲ್ಲದಷ್ಟು ಹಾನಿಗೊಳಗಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸಿಕೊಡಲಾಗುವುದು ಎಂದು ಸಿಎಂ ತಿಳಿಸಿದರು.

ವೈಮಾನಿಕ ಸಮೀಕ್ಷೆ:
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವಾಯುಸೇನೆಯ ಹೆಲಿಕಾಪ್ಟರ್‌ನಲ್ಲಿ ಎರಡು ಗಂಟೆಗಳ ಕಾಲ ಪ್ರವಾಹ ಪೀಡಿತ ಕರ್ನಾಟಕ, ಮಹಾರಾಷ್ಟ್ರದ ಕೆಲ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ನಂತರ ಮಾತಂದಿದ ಯಡಿಯೂರಪ್ಪ ‘ವಿಸ್ತೃತವಾಗಿ ಸಮೀಕ್ಷೆ ನಡೆಸಿದ ನಂತರ ನಷ್ಟದ ಮೊತ್ತವು ₹ 30,000ದಿಂದ ₹ 40,000 ಕೋಟಿಯವರೆಗೆ ತಲುಪಬಹುದು. ಇವೆಲ್ಲ ಪರಿಸ್ಥಿತಿಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಗಮನಕ್ಕೂ ತಂದಿದ್ದೇನೆ’ ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top