fbpx
ಸಮಾಚಾರ

ಮುನಿರತ್ನ ಕುರುಕ್ಷೇತ್ರ ಸಿನಿಮಾ ಸಂಭಾವನೆಯನ್ನು ಪ್ರವಾಹ ಸಂತ್ರಸ್ತರಿಗೆ ನೀಡಿದ ನಿಖಿಲ್ ಕುಮಾರಸ್ವಾಮಿ!

ವಿಪರೀತ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ಕಣ್ಣ ಎದುರೇ ಕುಸಿದು ಹೋದ ಉತ್ತರಕ ಕರ್ನಾಟಕ ಜನರ ಕಷ್ಟದ ಬಗ್ಗೆ ಎಂಥವರಿಗಾದರೂ ಕರುಣೆ ಹುಟ್ಟುತ್ತದೆ. ಇಡೀ ಕರ್ನಾಟಕದ ಎಲ್ಲ ಕಡೆಗಳಿಂದಲೂ ಉತ್ತರಕ ಕರ್ನಾಟಕ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಕನ್ನಡ ಚಿತ್ರರಂಗ ಕೂಡ ಸ್ಪಂದಿಸಿದ್ದು ಅನೇಕ ಕಲಾವಿದರು ಆಹಾರ,ಹಣ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಒಂದೊಂದು ರೀತಿಯಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ.

ಇದೀಗ ನೆರೆ ಸಂತ್ರಸ್ತರ ನೆರವಿಗೆ ನಟ ಕಮ್ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಧಾವಿಸಿದ್ದಾರೆ. ಜೆಡಿಎಸ್​ ಯುವ ಘಟಕದ ಅಧ್ಯಕ್ಷರೂ ಆಗಿರುವ ನಿಖಿಲ್ ಕುಮಾರಸ್ವಾಮಿ ಕುರುಕ್ಷೇತ್ರ ಸಿನೆಮಾದಲ್ಲಿ ತಾವು ಪಡೆದ ಸಂಭಾವನೆಯನ್ನು ನೆರೆ ಪರಿಹಾರವಾಗಿ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಆದರೆ ಕುರುಕ್ಷೇತ್ರದ ಸಂಭಾವನೆ ಎಷ್ಟು ಎಂದು ಎಲ್ಲಿಯೂ ಬಹಿರಂಗಪಡಿಸಿಲ್ಲ. ಎಷ್ಟು ಹಣವನ್ನು ಕೊಡುತ್ತಿದ್ದಾರೆಂದು ಹೇಳಿಲ್ಲ.

ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಜನರು ತತ್ತರಿಸಿದ್ದಾರೆ. ಈ ಸಮಯದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ನಾನು ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಯಾದಗಿರಿಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ನಮ್ಮ ಪಕ್ಷದ ವತಿಯಿಂದ ಜನರಿಗೆ ಸಹಾಯ ಮಾಡುತ್ತೇವೆ. ಮಳೆಯ ಆರ್ಭಟಕ್ಕೆ ಜನರು ಬೀದಿಗೆ ಬಂದಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸೂಕ್ತ ನೆರವು ನೀಡಬೇಕು ಎಂದು ನಿಖಿಲ್​ ಒತ್ತಾಯಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top