fbpx
ಸಮಾಚಾರ

ಉತ್ತರ ಕರ್ನಾಟಕ ಪ್ರವಾಹಕ್ಕೆ ನಿಜಕ್ಕೂ 2 ಕೋಟಿ ಕೊಟ್ಟರಾ ಸನ್ನಿ ಲಿಯೋನ್?

ವಿಪರೀತ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ಕಣ್ಣ ಎದುರೇ ಕುಸಿದು ಹೋದ ಉತ್ತರಕ ಕರ್ನಾಟಕ ಜನರ ಕಷ್ಟದ ಬಗ್ಗೆ ಎಂಥವರಿಗಾದರೂ ಕರುಣೆ ಹುಟ್ಟುತ್ತದೆ. ಇಡೀ ಕರ್ನಾಟಕದ ಎಲ್ಲ ಕಡೆಗಳಿಂದಲೂ ಉತ್ತರಕ ಕರ್ನಾಟಕ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಕನ್ನಡ ಚಿತ್ರರಂಗ ಕೂಡ ಸ್ಪಂದಿಸಿದ್ದು ಅನೇಕ ಕಲಾವಿದರು ಆಹಾರ,ಹಣ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಒಂದೊಂದು ರೀತಿಯಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ.

ಈ ನಡುವೆ ಉತ್ತರ ಕರ್ನಾಟಕ ನೆರೆ ಪ್ರವಾಹ ಪರಿಹಾರಕ್ಕೆ ಬಾಲಿವುಡ್ ನಟಿ ಸನ್ನಿ ಲಿಯೋನ್ 2 ಕೋಟಿ ರೂ. ಪರಿಹಾರ ನೀಡಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಷ್ಟಕ್ಕೂ ಅಸಲಿ ಕತೆ ಏನು? ಸನ್ನಿ ಲಿಯೋನ್ ಕೊಡುಗೆ ಕೊಟ್ಟಿರುವುದು ನಿಜವೆ? ಬಗ್ಗೆ ಎಲ್ಲಿಯೂ ಉಲ್ಲೇಖ ಇಲ್ಲ. ಯಾವ ಅಧಿಕೃತ ಪ್ರಕಟಣೆಯನ್ನು ಮಾಡಿಲ್ಲ. ಇದು ಎಷ್ಟರ ಮಟ್ಟಿಗೆ ಸತ್ಯವೋ ಸುಳ್ಳೋ ಎಂಬುದನ್ನು ಖುದ್ದು ಸನ್ನಿ ಲಿಯೋನ್ ರವರೇ ಸ್ಪಷ್ಟ ಪಡಿಸಬೇಕಾಗಿದೆ.

ಆದರೆ ಸನ್ನಿಯ 2 ಕೋಟಿ ಭಾರಿ ಚರ್ಚೆಯಾಗುತ್ತಿದ್ದಂತೆ ನಿವೃತ್ತ ಡಿಜಿಪಿ ಶಂಕರ್ ಬಿದರಿ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಉತ್ತರ ಕರ್ನಾಟಕ ಪರಿಹಾರ ನಿಧಿಗೆ ಸನ್ನಿಲಿಯೋನ್ 2 ಕೋಟಿ ಕೊಟ್ಟಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ಸನ್ನಿ ನಿಜವಾಗಿಯೂ ನೆರೆ ಸಂತ್ರಸ್ತರಿಗೆ ಹಣ ಕೊಟ್ಟಿದ್ದಾರಾ? ಎನ್ನುವ ಅನುಮಾನ ವ್ಯಕ್ತಪಡಿಸುವ ಜೊತೆಗೆ ಸನ್ನಿಲಿಯೊನ್ ಗೆ ನೆಟ್ಟಿಗರು ಧನ್ಯವಾದ ತಿಳಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top