ಪ್ರವಾಹದಿಂದ ತತ್ತರಿಸಿರುವ ಸಂತ್ರಸ್ತರ ಭೇಟಿಗೆ ಹೋಗಿದ್ದ ಸಂಸದ ಅನಂತಕುಮಾರ್ ಹೆಗಡೆ ಅವರು ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜನರ ಮಾತನ್ನು ಕೇಳದೆ, ಸರಿಯಾಗಿ ಸ್ಪಂದಿಸದೆ ಅನಂತ್ಕುಮಾರ್ ಅವರು ನಿರ್ಲಕ್ಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪ್ರವಾಹ ಪರಿಸ್ಥಿತಿ ಅವಲೋಕನ ಮಾಡಲು ನೇಗಿನಹಾಳ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಮಹಿಳೆಯರು ಹಾಗೂ ಗ್ರಾಮಸ್ಥರು ತೀವ್ರ ತರಾಟೆ ತೆಗದುಕೊಂಡರು. ‘ವಿಪರೀತ ಮಳೆ ಸುರಿದಿರುವುದರಿಂದ ಹಾಗೂ ಹಳ್ಳ ತುಂಬಿ ಹರಿದಿದ್ದರಿಂದ ಸಾಕಷ್ಟು ಮನೆಗಳು ಹಾನಿಗೊಳಗಾಗಿವೆ. ಒಂದ್ಸಾರಿ ಬಂದು ನೋಡಿ…’ ಎಂದು ಸಂತ್ರಸ್ತರು ವಿನಂತಿಸಿಕೊಂಡಾಗ, ‘ಎಲ್ಲವನ್ನೂ ಅಧಿಕಾರಿಗಳೇ ನೋಡಿಕೊಳ್ಳುತ್ತಾರೆ’ ಎಂದು ಅನಂತಕುಮಾರ್ ಕೇರ್ ಲೆಸ್ ಉತ್ತರ ನೀಡಿದರು.
ಪ್ರವಾಹದ ಬಗ್ಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಕೂಡ ಅನಂತ್ಕುಮಾರ್ ಅವರು ಕಿಡಿಕಾರಿದರು. ವಿಡಿಯೋ ಮಾಡುವುದನ್ನು ನಿಲ್ಲಿಸಿ ಎಂದಿದ್ದಾರೆ. ಹಾಗೆಯೇ ಮೊದಲೇ ಸಂಸದರ ನಡವಳಿಕೆಯಿಂದ ಸಿಟ್ಟಲಿದ್ದ ಸಂತ್ರಸ್ತ ಮಹಿಳೆಯರು ನಿನಗೆ ವೋಟ್ ಹಾಕುವುದಿಲ್ಲ ಎಂದು ಕೂಗಿ ಆಕ್ರೋಶ ಹೊರಹಾಕಿದ್ದಾರೆ. pic.twitter.com/rNzJIdyD8G
— ಸಾಮಾನ್ಯ ಕನ್ನಡಿಗ (@sakannadiga) August 12, 2019
ಇದರಿಂದ ಸಿಟ್ಟಿಗೆದ್ದ ಸಂತ್ರಸ್ತರು ಸಂಸದರನ್ನು ತರಾಟೆಗೆ ತೆಗೆದುಕೊಂಡರು. ನಿನಗೆ ವೋಟ್ ಹಾಕುವುದಿಲ್ಲ ಎಂದು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸಂಸದರ ಆಪ್ತರೊಬ್ಬರತ್ತ ಕೈ ಮಾಡಿ ಮಾತನಾಡಿದ ಮಹಿಳೆಯರು, ‘ಇವನಿಗೆ ವೋಟ್ ಹಾಕಬೇಕೆಂದು ಕೇಳಿಕೊಂಡು ನಮ್ಮ ಸಂಘಕ್ಕ ಕರ್ಕೊಂಡು ಬಂದಿದ್ರಿ. ಈಗ ನೋಡ್ ಇವ್ರ ಮಾತಾಡೋದ್ನ. ಇನ್ ಮ್ಯಾಲ್ ಇವನಿಗೆ ವೋಟ್ ಹಾಕಾಂಗಿಲ್ಲ…’ ಎಂದು ಏಕವಚನದಲ್ಲೇ ಕೂಗಾಡಿದರು. ಈ ವೇಳೆ ಕೂಡ ಮಹಿಳೆಯರ ಮಾತು ಕೇಳಿಯೂ ಕೇಳಿಸದಂತೆ ಅನಂತ್ಕುಮಾರ್ ಅವರು ಕುಳಿತ್ತಿದ್ದರು. ಹೀಗೆ ಗ್ರಾಮಸ್ಥರ ತೀವ್ರ ತರಾಟೆಗೆ ತೆಗೆದುಕೊಂಡ ನಂತರ ಬೇರೆ ಪರಿಹಾರ ಕೇಂದ್ರಕ್ಕೆ ಸಂಸದರು ತೆರಳಿದರು.
ಈ ಘಟನೆಯನ್ನು ಯುವಕನೊಬ್ಬ ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದರು. ಇದನ್ನು ನೋಡಿದ ಅನಂತಕುಮಾರ್ ವಿಡಿಯೋ ತಾಕೀತು ಮಾಡಿದರು. ಮೊಬೈಲ್ ಕಸಿದುಕೊಳ್ಳಲು ಮುಂದಾದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
