fbpx
ಸಮಾಚಾರ

“ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡದಿದ್ದರೇ ಈ ಸರ್ಕಾರವನ್ನೇ ಕೆಡವುತ್ತೇವೆ” ಬಿಜೆಪಿ ಶಾಸಕ ಬಾಲಚಂದ್ರ

ವಿಪರೀತ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ಕಣ್ಣ ಎದುರೇ ಕುಸಿದು ಹೋದ ಉತ್ತರಕ ಕರ್ನಾಟಕ ಜನರ ಕಷ್ಟದ ಬಗ್ಗೆ ಎಂಥವರಿಗಾದರೂ ಕರುಣೆ ಹುಟ್ಟುತ್ತದೆ. ಇಡೀ ಕರ್ನಾಟಕದ ಎಲ್ಲ ಕಡೆಗಳಿಂದಲೂ ಉತ್ತರಕ ಕರ್ನಾಟಕ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಇಂಥವರ ಮನ ಕೂಡ ಮಿಡಿಯುವಂತಿದೆ.

ಈ ನಡುವೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲಿಲ್ಲವಾದರೆ ಈ ಸರ್ಕಾರವನ್ನೇ ಕೆಡವಿ ಬಿಡುತ್ತೇವೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. “ಬೆಳಗಾವಿ ಜಿಲ್ಲೆಯ ಅನೇಕ ಗ್ರಾಮಗಳು ಮುಳುಗಡೆಯಾಗಿದ್ದು, ಜನರ ಬದುಕು ಬೀದಿಗೆ ಬಿದ್ದಿದೆ. ನೆರೆ ಸಂತ್ರಸ್ತರ ಪಾಡು ಶೋಚನೀಯ ಸ್ಥಿತಿ ತಲುಪಿದೆ. ಮನೆ-ಮಠಗಳು ಪ್ರವಾಹದಲ್ಲಿ ಕೊಚ್ಚಿಹೋಗುವುದರ ಜೊತೆಗೆ ಜನರ ಬದುಕೂ ಕೊಚ್ಚಿಹೋಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 25 ಗ್ರಾಮಗಳಲ್ಲಿ ಮನೆಗಳು ಸಂಪೂರ್ಣ ನಾಶವಾಗಿವೆ. ಹೀಗಾಗಿ ನೆರೆ ಸಂತ್ರಸ್ತರಿಗೆ ಸರ್ಕಾರ ಮನೆ ಕಟ್ಟಿಸಿಕೊಡಬೇಕು”

ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲೇಬೇಕು. ಇಲ್ಲವಾದರೆ ಈ ಸರ್ಕಾರವನ್ನೇ ಕೆಡವಿಬಿಡುತ್ತೇನೆ. ನಿಮಗೆ ಮನೆ ಕಟ್ಟಿಸಿಕೊಡುವ ಜವಾಬ್ದಾರಿ ನಮ್ಮದಾಗಿದೆ ಎಂದು ನೆರೆ ಸಂತ್ರಸ್ತರಿಗೆ ಭರವಸೆ ನೀಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top