fbpx
ಸಮಾಚಾರ

ಪ್ರವಾಹದ ಬಗ್ಗೆ ತಲೆಕೆಡಿಸಿಕೊಳ್ಳದ ಕಾಂಗ್ರೆಸ್ ನಾಯಕರ ಭರ್ಜರಿ ಬಾಡೂಟ!

ವಿಪರೀತ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ಕಣ್ಣ ಎದುರೇ ಕುಸಿದು ಹೋದ ಉತ್ತರಕ ಕರ್ನಾಟಕ ಜನರ ಕಷ್ಟದ ಬಗ್ಗೆ ಎಂಥವರಿಗಾದರೂ ಕರುಣೆ ಹುಟ್ಟುತ್ತದೆ. ಇಡೀ ಕರ್ನಾಟಕದ ಎಲ್ಲ ಕಡೆಗಳಿಂದಲೂ ಉತ್ತರಕ ಕರ್ನಾಟಕ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಪ್ರಕೃತಿ ಸೃಷ್ಟಿಸಿದ ಈ ದಾರುಣಕ್ಕೆ ಸಾಮಾನ್ಯ ಜನರು ಕೂಡ ಮರುಗುತ್ತಿದ್ದು ಆಹಾರ,ಹಣ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಒಂದೊಂದು ರೀತಿಯಲ್ಲಿ ನೆರೆ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ.

ಆದರೆ ಈ ಬಗ್ಗೆ ಕಿಂಚಿತ್ತೂ ತೆಲೆಕೆಡಿಸಿಕೊಳ್ಳದ ರಾಜ್ಯ ಕಾಂಗ್ರೆಸ್ ನಾಯಕರು ಮಾತ್ರ ಭರ್ಜರಿ ಬಿರಿಯಾನಿ ಊಟ ಮಾಡಿದ್ದಾರೆ. ಕಾಂಗ್ರೆಸ್ಸಿನ ವಿಧಾನಪರಿಷತ್ ಸದಸ್ಯರಾಗಿರುವ ನಜೀರ್ ಅಹ್ಮದ್​ ಮನೆಯಲ್ಲಿ ಬ್ರಕಿದ್​ ಹಿನ್ನೆಲೆಯಲ್ಲಿ ನಡೆದ ಔತಣಕೂಟದಲ್ಲಿ ಕಾಂಗ್ರೆಸ್ ನಾಯಕರು ಬಿರಿಯಾನಿ ಊಟ ಮಾಡಿರುವ ವಿಚಾರ ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸಂತ್ರಸ್ತರ ಕಣ್ಣೀರು ಒರೆಸಲು ಬಾರದ ಹಿರಿಯ ಕಾಂಗ್ರೆಸ್ ನಾಯಕರು ಭರ್ಜರಿಯಾಗಿ ಬಾಡೂಟ ಸವಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದು ಸರಿಯಲ್ಲ ಎಂದು ಚರ್ಚೆಯಾಗಿದೆ. ರಾಜ್ಯದ ಜನ ಸಂಕಷ್ಟದಲ್ಲಿರುವಾಗ ಈ ರೀತಿ ಭರ್ಜರಿ ಬಾಡೂಟ ಮಾಡಿ ಸಾರ್ವಜನಿಕವಾಗಿ ಪ್ರದರ್ಶಿಸುವುದು ಸರಿಯಲ್ಲ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ. ಅಂದಹಾಗೇ ಕಾಂಗ್ರೆಸ್ ನಾಯಕರು ಬಾಡೂಟ ಸವಿದ ಈ ಫೋಟೋಗಳು ವೈರಲ್ ಆಗಿವೆ.

ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಹೆಚ್.ಸಿ. ಮಹದೇವಪ್ಪ, ಕೃಷ್ಣಬೈರೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೊದಲಾದವರು ಊಟ ಮಾಡಿದ ಫೋಟೋವನ್ನು ಜಮೀರ್ ಅಹ್ಮದ್ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top