fbpx
ಸಮಾಚಾರ

ನಾಲ್ಕು ಬಾರಿ ಸಿಎಂ ಆದ ನಂತರ ಮತ್ತೊಂದು ವಿಚಿತ್ರ ದಾಖಲೆ ಬರೆದ ಯಡಿಯೂರಪ್ಪ- ಇತಿಹಾಸದಲ್ಲೇ ಇದು ಮೊದಲು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇದೀಗ ಮತ್ತೊಂದು ದಾಖಲೆ ಬರೆಯಲು ಸಜ್ಜಾಗುತ್ತಿದ್ದಾರೆ . ಕರ್ನಾಟಕ ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಕ್ಯಾಬಿನೆಟ್ ಇಲ್ಲದೆ ಸ್ವತಂತ್ರ ದಿನಾಚರಣೆಯನ್ನು ಆಚರಿಸುತ್ತಿದ್ದಾರೆ. ಕ್ಯಾಬಿನೆಟ್ ಇಲ್ಲದೆ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವ ಮೂಲಕ ರಾಜ್ಯದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ

ಅಂದಹಾಗೆ ಮುಖ್ಯಮಂತ್ರಿಗಳು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನರನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಆದರೆ ಈ ಬಾರಿ ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಚಿವರು ಇಲ್ಲದ ಕಾರಣ ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.

ಸಾಮಾನ್ಯವಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಇದ್ದಾಗ ಮಾತ್ರ ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಲು ಅನುಮತಿ ಇರುತ್ತದೆ. ಆದರೆ ಈ ಬಾರಿ ಸರ್ಕಾರವಿದ್ದರೂ ಸಚಿವ ಸಂಪುಟ ರಚನೆ ಆಗದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. ಹೀಗಾಗಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಂಥ ಸ್ಥಿತಿಗೆ BSY ಸರ್ಕಾರ ಸಾಕ್ಷಿಯಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top