fbpx
ಸಮಾಚಾರ

ಬೆಂಗಳೂರಿಗೆ ಶಿಫ್ಟ್‌ ಅಯ್ತು ‘ಪೈಲ್ವಾನ್‌’ ಆಡಿಯೊ ಬಿಡುಗಡೆ ಕಾರ್ಯಕ್ರಮ

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ‘ಪೈಲ್ವಾನ್‌’ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭ ಬೆಂಗಳೂರಿಗೆ ಶಿಫ್ಟ್‌ ಆಗಿದೆ. ಚಿತ್ರದುರ್ಗದಲ್ಲಿ ಇದೇ 9ರಂದು ಅದ್ದೂರಿಯಾಗಿ ಆಡಿಯೊ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿತ್ತು. ಆದರೆ, ಉತ್ತರ ಕರ್ನಾಟಕ ಸೇರಿದಂತೆ ನಾಡಿನ ಹಲವೆಡೆ ಪ್ರವಾಹ ತಲೆದೋರಿದ್ದು ಜನ– ಜಾನುವಾರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ, ಕಾರ್ಯಕ್ರಮವನ್ನು ಮುಂದೂಡಿತ್ತು. ಈಗ ಬೆಂಗಳೂರಿನಲ್ಲಿ ಆಗಸ್ಟ್‌ 18ರಂದು ಆಡಿಯೊ ಬಿಡುಗಡೆ ಮಾಡಲು ಮುಂದಾಗಿದೆ.

ಇದೇ ಭಾನುವಾರ (ಆಗಸ್ಟ್ 18) ರಂದು ಕಾರ್ಯಕ್ರಮ ನಡೆಯಲಿದೆ. ಯಾವುದೇ ದೊಡ್ಡ ಮಟ್ಟದ ಕಾರ್ಯಕ್ರಮದ ಮೂಲಕ ನಡೆಯುತ್ತಿಲ್ಲ. ಆಯ್ದ ವ್ಯಕ್ತಿಗಳಿಗೆ ಮಾತ್ರ ಇಲ್ಲಿ ಅವಕಾಶ ನೀಡಲಾಗುತ್ತದೆ. ಸದ್ಯ ಬೆಂಗಳೂರಿಗೆ ಶಿಫ್ಟ್ ಆಗಿರೋ ಆಡಿಯೋ ರಿಲೀಸ್‍ನಲ್ಲೂ ಅಪ್ಪು ಅತಿಥಿಯಾಗಿರುತ್ತಾರಂತೆ. ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಸಂಜೆ ಐದು ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಸೆಪ್ಟೆಂಬರ್ 12ಕ್ಕೆ ತೆರೆಗೆ:
ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದ್ದು ಸೆಪ್ಟೆಂಬರ್ 12ರಂದು ಬಿಡುಗಡೆಗೊಳಿಸುವುದಾಗಿ ಘೋಷಿಸಿದ್ದಾರೆ. ಇನ್ನು ಐದೂ ಭಾಷೆಯಲ್ಲಿಯೂ ಅಂದೇ ಚಿತ್ರ ತೆರೆಕಾಣಲಿದೆ. ಪಂಚಭಾಷೆಯಲ್ಲಿ ನಿರ್ಮಾಣವಾಗಿರುವ ಪೈಲ್ವಾನ್ ವಿತರಣಾ ಹಕ್ಕನ್ನು ಜೀ ಸ್ಟುಡಿಯೋಸ್ ಪಡೆದುಕೊಂಡಿದ್ದು, ದೇಶದಾದ್ಯಂತ ಚಿತ್ರವನ್ನು ಏಕಕಾಲದಲ್ಲಿ 2500ಕ್ಕಿಂತ ಹೆಚ್ಚಿನ ಚಿತ್ರಮಂದಿರದಲ್ಲಿ ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ.

ಪೈಲ್ವಾನ್ ಬಗ್ಗೆ:
ಪೈಲ್ವಾನ್ ಚಿತ್ರದ ಬಗ್ಗೆ ಹೇಳಬೇಕೆಂದರೆ ಮುಂಬೈ ಬೆಡಗಿ ಆಕಾಂಕ್ಷ ಸಿಂಗ್ ಸುದೀಪ್’ಗೆ ನಾಯಕಿಯಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಬಾಲಿವುಡ್ ನಟ ಸುನಿಲ್ ಶೆಟ್ಟಿ, ಕರುಣ್ ದುಹಾನ್ ಸಿಂಗ್, ಸುಶಾಂತ್ ಸಿಂಗ್, ಅವಿನಾಶ್ ಸೇರಿದಂತೆ ಹಲವಾರು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. RRR ಮೋಶನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ತಯಾರಾಗುತ್ತಿರುವ ಪೈಲ್ವಾನ್ ಚಿತ್ರವನ್ನು ನಿರ್ದೇಶಕ ಕೃಷ್ಣಾ ಅವರ ಪತ್ನಿ ಸ್ವಪ್ನ ಕೃಷ್ಣಾ ನಿರ್ಮಾಣ ಮಾಡುತ್ತಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮತ್ತು ಕರುಣಾಕರ್ ಅವರ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top